ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್: ಏನಿರುತ್ತೆ, ಏನಿರಲ್ಲ?

ಸಂಜೆ 7ರಿಂದಲೇ ಕರ್ಫ್ಯೂ ಜಾರಿ
Last Updated 23 ಮೇ 2020, 14:20 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದೆ. ಈ ವಧಿಯಲ್ಲಿ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದ್ದರೂ ಪ್ರತಿ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಘೊಷಿಸಿದ್ದಾರೆ. ಇಂದು (ಶನಿವಾರ) ಸಂಜೆ 7 ಗಂಟೆಗೇ ಕರ್ಫ್ಯೂ ಜಾರಿಯಾಗಿದ್ದು ಸೋಮವಾರ ಬೆಳಿಗ್ಗೆ 7ರವರೆಗೆ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಹೇಳಿದೆ.

ಏನೇನು ಇರಲಿವೆ?

* ಔಷಧ ಅಂಗಡಿಗಳು

* ಆಸ್ಪತ್ರೆಗಳು

* ಹಾಲಿನ ಅಂಗಡಿಗಳು

* ತರಕಾರಿ ಮಾರಾಟ

ಏನೇನು ಇರಲ್ಲ?

* ಸಮೂಹ ಸಾರಿಗೆ

* ಬಸ್

* ಆಟೊ

* ಟ್ಯಾಕ್ಸಿ

* ಅಂಗಡಿ ಮುಂಗಟ್ಟು

ಪೂರ್ವ ನಿಗದಿತ ಮದುವೆ ಸಮಾರಂಭಕ್ಕಿದೆ ಅನುಮತಿ

‘ಪೂರ್ವ ನಿಗದಿತ ಮದುವೆ ಸಮಾರಂಭಗಳನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಅಂತರ ಕಾಯ್ದುಕೊಂಡು ಗರಿಷ್ಠ 50 ಅತಿಥಿಗಳು ಮೀರದಂತೆ ಸರಳವಾಗಿ ಮದುವೆ ಮಾಡಲು ಅನುಮತಿ ನೀಡಲಾಗಿದೆ’ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಕರ್ಫ್ಯೂ ಕಟ್ಟುನಿಟ್ಟು’

ನಾಲ್ಕನೇ ಅವಧಿಯ ಲಾಕ್‌ಡೌನ್‌ಗಿಂತಲೂ ಮೊದಲಿದ್ದ ಮಾದರಿಯಲ್ಲಿಯೇ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ. ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಕರ್ಫ್ಯೂ ಅವಧಿಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಇರಲಿದೆ. ಈ ಅವಧಿಯಲ್ಲಿ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT