ಸೋಮವಾರ, ಮಾರ್ಚ್ 30, 2020
19 °C

ಮೈಸೂರಿನಲ್ಲಿ 3ನೇ ವ್ಯಕ್ತಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ 35 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಕಾಯಿಲೆ ದೃಢಪಟ್ಟಿದೆ. ಇವರು ಯಾವುದೇ ಪ್ರವಾಸ ಮಾಡಿರಲಿಲ್ಲ, ಸೋಂಕಿತರ ಸಂಪರ್ಕಕ್ಕೆ ಬಂದಿರಲಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.

ನಂಜನಗೂಡಿನಲ್ಲಿ ಇವರು ಔಷಧ ಉತ್ಪಾದನಾ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ, ಇವರ ನೇರ ಸಂಪರ್ಕಕ್ಕೆ ಬಂದ 8 ಜನರನ್ನು ಹೋಂಕ್ವಾರೆಂಟೇನ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದುವರೆಗೂ ವಿದೇಶ ಪ್ರವಾಸದಿಂದ ಬಂದವರಲ್ಲಿ ಮಾತ್ರವೇ ಕೋವಿಡ್ ಕಾಯಿಲೆ ಕಂಡು ಬಂದಿತ್ತು. ಆದರೆ, ಈಗ ಯಾವುದೇ ಪ್ರಯಾಣ ನಡೆಸದವರಲ್ಲಿಯೂ ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು