ಬುಧವಾರ, ಮಾರ್ಚ್ 3, 2021
31 °C

ಕಾನ್‌ಸ್ಟೆಬಲ್‌ಗೆ ಕೋವಿಡ್‌ | ಶೌಚಾಲಯ ಬಳಸಿದ್ದರಿಂದ ಹರಡಿದ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿಯ ಕೆಎಸ್‌ಆರ್‌ಪಿ ಕಮಾಂಡೆಂಟ್‌ ಅವರ ನಿವಾಸದಲ್ಲಿ ಭದ್ರತಾ ಕೆಲಸ ನಿರ್ವಹಿಸುತ್ತಿದ್ದ 52 ವರ್ಷ ವಯಸ್ಸಿನ ಕೆಎಸ್‌ಆರ್‌ಪಿ ಕಾನ್‌ಸ್ಟೆಬಲ್‌ಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ.

ಕೆಎಸ್‌ಆರ್‌ಪಿ ಕಮಾಂಡೆಂಟ್‌ ಅವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಈ ಕಾನ್‌ಸ್ಟೆಬಲ್‌ ಅವರೊಂದಿಗೆ ಒಡನಾಟ ಹೊಂದಿದ್ದ ಅಡುಗೆಯವರನ್ನೂ ಕ್ವಾರಂಟೈನ್‌ ಮಾಡಲಾಗಿದೆ.

ಇಲ್ಲಿಯ ಗಾಜಿಪುರದ ಪುಟಾಣಿ ಗಲ್ಲಿಯ 78 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಅವರ ಮನೆಯ ಪಕ್ಕದಲ್ಲಿಯೇ ಈ ಕಾನ್‌ಸ್ಟೆಬಲ್‌ ವಾಸವಾಗಿದ್ದರು. ಇವರಿಬ್ಬರೂ ಒಂದೇ ಶೌಚಾಲಯ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು