ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: 12 ಗಂಟೆಗಳಲ್ಲಿ ಪರೀಕ್ಷೆ

Last Updated 7 ಮೇ 2020, 16:23 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರೊಂದಿಗೆ ನೇರ ಸಂಪರ್ಕ ಹೊಂದಿರುವವರು ಸೇರಿದಂತೆ ಎ ವರ್ಗದಲ್ಲಿ ಬರುವವರ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು 12 ಗಂಟೆಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಸುತ್ತೋಲೆ ಹೊರಡಿಸಿದ್ದಾರೆ.

ಆದ್ಯತೆಯ ಆಧಾರದ ಮೇಲೆ ಸೋಂಕು ಶಂಕಿತರ ರಕ್ತ ಹಾಗೂ ಗಂಟಲು ದ್ರವವನ್ನು ಪರೀಕ್ಷೆಗೆ ಪ್ರಯೋಗಾಲಯಗಳಿಗೆ ಕಳುಹಿಸಬೇಕು. ಸಂಶಯಾಸ್ಪದವಾಗಿ ಮೃತಪಟ್ಟವರು, ಸೋಂಕಿತರೊಂದಿಗೆ ನೇರ ಹಾಗೂ ಪರೋಕ್ಷ ಸಂಪರ್ಕ ಹೊಂದಿರುವವರು, ಸೋಂಕು ಲಕ್ಷಣ ಹೊಂದಿರುವ ಆರೋಗ್ಯ ಕಾರ್ಯಕರ್ತರು ಹಾಗೂ ತೀವ್ರ ಉಸಿರಾಟದ ಸಮಸ್ಯೆ (ಸಾರಿ) ಎದುರಿಸುತ್ತಿರುವವರು ಎ ವರ್ಗಕ್ಕೆ ಸೇರಲಿದ್ದು, ಅವರ ಮಾದರಿಗಳನ್ನು ಆದಷ್ಟು ಬೇಗ ಪರೀಕ್ಷೆ ನಡೆಸಬೇಕು. ಶೀತಜ್ವರ ಮಾದರಿಯ ಅನಾರೋಗ್ಯ ಸಮಸ್ಯೆಯಿಂದ (ಐಎಲ್‌ಐ) ಬಳಲುತ್ತಿರುವವರು ಬಿ ವರ್ಗದಡಿ ಬರಲಿದ್ದು, ಅವರ ಮಾದರಿಗಳನ್ನು 24 ಗಂಟೆಗಳಲ್ಲಿ ಪರೀಕ್ಷೆ ನಡೆಸಬೇಕು. ಲಕ್ಷಣಗಳು ಗೋಚರಿಸದ ಸಿ ವರ್ಗದವರ ಮಾದರಿಗಳನ್ನು 24ರಿಂದ 48ಗಂಟೆಗಳೊಳಗೆ ಪರೀಕ್ಷೆ ಮಾಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT