ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈರಲ್‌ ವಿಡಿಯೊ| ವಿದೇಶದಿಂದ ಮರಳಿದವನ ಬಲವಂತವಾಗಿ ಆಸ್ಪತ್ರೆಗೆ ಕರೆತಂದರು!

Last Updated 22 ಮಾರ್ಚ್ 2020, 9:48 IST
ಅಕ್ಷರ ಗಾತ್ರ

ಬಾಗಲಕೋಟೆ: ವಾರದ ಹಿಂದೆ ಮಲೇಶಿಯಾದಿಂದ ಹುನಗುಂದ ತಾಲ್ಲೂಕಿನ ಗ್ರಾಮವೊಂದಕ್ಕೆ ಮರಳಿದ್ದ ಯುವಕನನ್ನು ಗ್ರಾಮಸ್ಥರು ನೀಡಿದ ಮಾಹಿತಿ ಆಧರಿಸಿ ಶನಿವಾರ ಸಂಜೆ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಬಲವಂತವಾಗಿ ಕರೆತಂದು ಐಸೊಲೇಶನ್ ವಾರ್ಡ್ ನಲ್ಲಿ ನಿಗಾದಲ್ಲಿ ಇಡಲಾಗಿದೆ.

ಯುವಕ ಜ್ವರದಿಂದ ಬಳಲುತ್ತಿದ್ದನು. ವಿದೇಶದಿಂದ ಮರಳಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹೆದರಿದ್ದರು. ಆಂಬುಲೆನ್ಸ್ ಕಳಿಸಿ ಕರೆತಂದು ಚಿಕಿತ್ಸೆ ನೀಡಿದ್ದೇವೆ. ಈಗ ಚೇತರಿಸಿಕೊಂಡಿದ್ದಾನೆ. ಮೇಲ್ನೋಟಕ್ಕೆ ಕೊರೊನಾ ವೈರಸ್ ಸೋಂಕು ಪೀಡಿತ ಅನ್ನಿಸುತ್ತಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ ಎಂದು ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ತಿಳಿಸಿದರು.

ವಿಡಿಯೊ ವೈರಲ್:

ಯುವಕನನ್ನು ಗ್ರಾಮದಿಂದ ಆಂಬುಲೆನ್ಸ್ ಮೂಲಕ ಕರೆದೊಯ್ಯುವ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ. ಜೊತೆಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ (ಪಾಸಿಟಿವ್) ಎಂಬ ವದಂತಿಯೂ ಹರಡಿದೆ. ಹೀಗಾಗಿ ಹುನಗುಂದ ಗ್ರಾಮೀಣ ಭಾಗದಲ್ಲಿ ಆತಂಕದ ಕಾರ್ಮೋಡ ಆವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT