ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಆದೇಶ ಉಲ್ಲಂಘಿಸಿ ಬಿಜೆಪಿ ಶಾಸಕರ ಪುತ್ರಿಯ ಅದ್ಧೂರಿ ಮದುವೆ

Last Updated 15 ಮಾರ್ಚ್ 2020, 5:47 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ವೈರಾಣು ಸೋಂಕು ಹರಡುವ ಭೀತಿ ಇರುವುದರಿಂದ ಅದ್ಧೂರಿ ಮದುವೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿರುವ ನಡುವೆಯೇ, ಇಲ್ಲಿನ ಖಾನಾಪುರ ರಸ್ತೆಯಲ್ಲಿರುವ ಶಗುನ್ ಗಾರ್ಡನ್‌ನಲ್ಲಿ ಅದ್ಧೂರಿಯಾಗಿ ಮದುವೆ ನಡೆಯುತ್ತಿದೆ.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿಯ ವಿವಾಹದಲ್ಲಿ ನೂರಾರು ಮಂದಿ ಭಾಗವಹಿಸಿದ್ದಾರೆ.

ಹೆಚ್ಚಿನ ಜನಸಂದಣಿಯ ಕಾರ್ಯಕ್ರಮ ನಿಯಂತ್ರಿಸಬೇಕು ಎನ್ನುವುದು ಸರ್ಕಾರದ ಆದೇಶ. ಆದರೆ, ಇದನ್ನು ಇಲ್ಲಿ ಸ್ಪಷ್ಟವಾಗಿ ಉಲ್ಲಂಘಿಸಲಾಗಿದೆ. ಆದರೆ, ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ! ಬೆಳಿಗ್ಗೆಯಿಂದಲೂ ಜನರು ಸೇರುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಈಗಾಗಲೇ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಜವಳಿ ಸಚಿವ ಶ್ರೀಮಂತ ಪಾಟೀಲ, ಶಾಸಕರಾದ ಗಣೇಶ ಹುಕ್ಕೇರಿ, ಮಹೇಶ ಕುಮಠಳ್ಳಿ, ಆನಂದ ಮಾಮನಿ ಮೊದಲಾದವರು‌ ಬಂದಿದ್ದಾರೆ. ವಿವಿಧ ಮಠಗಳ ಸ್ವಾಮೀಜಿಗಳು ಕೂಡ ಬಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಪುಟದ ಹಲವು ಸಚಿವರು ಮದುವೆಗೆ ಬರುತ್ತಿದ್ದಾರೆ.

ಸ್ಥಳದಲ್ಲಿ ಎರಡು ಕಡೆಗಳಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳ ಬ್ಯಾನರ್ ಹಾಕಲಾಗಿದೆ. ಸ್ಯಾನಿಟೈಸರ್ ಹಾಕಿಕೊಂಡು ಹೋಗುವಂತಹ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT