ಶುಕ್ರವಾರ, ಏಪ್ರಿಲ್ 3, 2020
19 °C

ಸ್ವಇಚ್ಛೆಯಿಂದ ತಪಾಸಣೆಗೆ ಒಳಪಡಿ, ಇಲ್ಲದಿದ್ದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೆಲಸಕ್ಕೆಂದು ಹೊರದೇಶಕ್ಕೆ ಹೋಗಿ ಕಳೆದ‌ ಒಂದು ತಿಂಗಳಿನಿಂದ ಇಂದಿನವರೆಗೂ ಜಿಲ್ಲೆಗೆ ವಾಪಸ್ಸಾದ ನಾಗರಿಕರು ಸ್ವಯಂಪ್ರೇರಿತರಾಗಿ ಕಲಬುರಗಿ ಇ.ಎಸ್.ಐ.ಸಿ. ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಪಡಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕೊರೊನಾ ವೈರಸ್ ಸೊಂಕು ಹೆಚ್ಚಾಗಿ ಹೊರದೇಶದಿಂದ‌ ಬಂದವರಲ್ಲೇ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಈ ಜಿಲ್ಲಾಧಿಕಾರಿಗಳು ಈ ಮನವಿ ಮಾಡಿದ್ದಾರೆ. 

ಹೊರದೇಶದಿಂದ ವಾಪಸ್ಸಾದ ನಾಗರಿಕರು ಮನೆಯಲ್ಲಿ ಗೌಪ್ಯವಾಗಿರಬಾರದು. ಕೂಡಲೇ ತಮ್ಮ ಪ್ರವಾಸದ ಇತಿಹಾಸದೊಂದಿಗೆ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.

ಇಲ್ಲದಿದಲ್ಲಿ, ಹೊರದೇಶದಿಂದ‌ ಮರಳಿದವರ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಕೈಗೊಳ್ಳುವುದು ಅನಿವಾರ್ಯ ಎಂದು ಜಿಲ್ಲಾಧಿಕಾರಿ ಶರತ್ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು