ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆ ವಿಚಾರ: ಸುಗ್ರೀವಾಜ್ಞೆ ಪ್ರಶ್ನಿಸಿ ಪಿಐಎಲ್

Last Updated 24 ಏಪ್ರಿಲ್ 2020, 16:39 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್-19ರ ನಿಯಂತ್ರಣದಲ್ಲಿ ತೊಡಗಿರುವ ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆ ತಡೆಯಲು ಜಾರಿಗೊಳಿಸಲಾಗಿರುವ ಸುಗ್ರೀವಾಜ್ಞೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ.

ವಕೀಲ ಜಿ.ಆರ್.ಮೋಹನ್ ಸಲ್ಲಿಸಿರುವ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ಇದೇ 28ರಂದು ವಿಚಾರಣೆ ‌ನಡೆಸಲಿದೆ.

'ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಬಲಹೀನವಾಗಿದೆ. ಆರೋಗ್ಯ ಕಾರ್ಯಕರ್ತರ ಮೇಲಿನ ಹಲ್ಲೆ ತಡೆಗೆ ಸಮರ್ಥವಾಗಿಲ್ಲ. ಆದ್ದರಿಂದ, ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಅಳವಡಿಸಿಕೊಳ್ಳಲು ನಿರ್ದೇಶಿಸಬೇಕು' ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

'ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯಲ್ಲಿ ಆರೋಪಿಗಳಿಗೆ ಜಾಮೀನು ಸಿಗಲು ಅವಕಾಶವಿದೆ ಮತ್ತು ಮೂರು ವರ್ಷ ಮಾತ್ರವೇ ಶಿಕ್ಷೆ ನಿಗದಿಪಡಿಸಲಾಗಿದೆ. ಆದರೆ, ಕೇಂದ್ರದ ಕಾಯ್ದೆ ಜಾಮೀನು ರಹಿತವಾಗಿದೆ ಮತ್ತು ಏಳು ವರ್ಷದವರೆಗೆ ಶಿಕ್ಷೆ ವಿಧಿಸಲು ಅವಕಾಶವಿದೆ' ಎಂದು ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT