ಶನಿವಾರ, ಜೂಲೈ 11, 2020
29 °C

ನಾಳೆ ಆಪ್ತಮಿತ್ರ ಸಹಾಯವಾಣಿಗೆ ಚಾಲನೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ರಾಜ್ಯ ಸರ್ಕಾರವು ಇನ್ಫೊಸಿಸ್‌ ಜೊತೆ ಒಡಂಬಡಿಕೆ ಮಾಡಿಕೊಂಡು ಬುಧವಾರ ‘ಆಪ್ತಮಿತ್ರ ಸಹಾಯವಾಣಿ’ ಆರಂಭಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಇನ್ಫೊಸಿಸ್‌ ಈ ಆ್ಯಪ್‌ ಅಭಿವೃದ್ಧಿಪಡಿಸಿದೆ. ಈ ಕೇಂದ್ರದಲ್ಲಿ 2 ಸಾವಿರ ಮಂದಿ ಕಾರ್ಯನಿರ್ವಹಿಸಲಿದ್ದಾರೆ. ವೈದ್ಯಕೀಯ ಕ್ಷೇತ್ರದ ಪರಿಣತರು, ವೈದ್ಯರು, ನರ್ಸ್‌ಗಳು ಇರಲಿದ್ದಾರೆ. ರಾಜ್ಯದ ಯಾವುದೇ ಮೂಲೆಯಿಂದ ಜನರು ಈ ಕೇಂದ್ರಕ್ಕೆ (14410 ಸಂಖ್ಯೆ) ಕರೆ ಮಾಡಿ ಸಹಾಯ ಪಡೆಯಬಹುದು ಎಂದರು.

ನೆಗಡಿ, ಜ್ವರ, ಕೆಮ್ಮು ಇದ್ದವರು ನೆರವು ಪಡೆಯಬಹುದು. ಟೆಲಿ ಮೆಡಿಷನ್‌ ಸೌಲಭ್ಯವೂ ಇರಲಿದೆ. ಈ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬೆಂಗಳೂರಿನಲ್ಲಿ ಬುಧವಾರ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು