ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ದೃಢಪಟ್ಟ ವೈದ್ಯ ವಿದ್ಯಾರ್ಥಿನಿ ಫೋಟೊ ವೈರಲ್‌: ಬಂಧನ

Last Updated 24 ಏಪ್ರಿಲ್ 2020, 14:38 IST
ಅಕ್ಷರ ಗಾತ್ರ

ವಿಜಯಪುರ: ಕೋವಿಡ್‌–19 ದೃಢಪಟ್ಟಿರುವ ಇಲ್ಲಿನ ಬಿ.ಎಲ್‌.ಡಿ.ಇ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಯನ್ನು ಬಂಧಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್‌ ತಿಳಿಸಿದರು.

ನಗರ ಸೇರಿದಂತೆ ಜಿಲ್ಲೆಯಲ್ಲಿ ಲಾಕ್‌ಡೌನ್‌ ಆದೇಶ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸುತ್ತಿದ್ದ 200 ಜನರನ್ನು ವಶಕ್ಕೆ ಪಡೆದು, 60 ಜನರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗಿದೆ ಎಂದು ಹೇಳಿದರು.

ಮತ್ತಿಬ್ಬರಿಗೆ ಕೋವಿಡ್‌ ದೃಢ

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಚಪ್ಪರಬಂದ್‌ನ ಮಹಿಳೆ(ಪಿ221) ಸಂಪರ್ಕದಿಂದ 17 ವರ್ಷದ ಬಾಲಕ ಮತ್ತು 28 ವರ್ಷ ವಯಸ್ಸಿನ ಯುವಕನಿಗೆ ಕೊರೊನಾ ಸೋಂಕು ತಗಲಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್–19 ಪೀಡಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

36 ವರದಿ ಬಾಕಿ

ನಗರದಲ್ಲಿ ಈಗಾಗಲೇ ಸೀಲ್‌ಡೌನ್‌ ಮಾಡಲಾಗಿರುವ ಚಪ್ಪರಬಂದ್‌ ಪ್ರದೇಶದಲ್ಲಿ ಒಟ್ಟು 1253 ಜನರ ಗಂಟಲುದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 36 ವರದಿ ಬರುವುದು ಬಾಕಿ ಇದೆ. ಉಳಿದಂತೆ ಎಲ್ಲರ ವರದಿ ಈಗಾಗಲೇ ಬಂದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT