ಶನಿವಾರ, ಜುಲೈ 31, 2021
23 °C

ಕಲಬುರ್ಗಿ, ಬಾಗಲಕೋಟೆ: ಮದುವೆ ಸಮಾರಂಭ ನಿಷೇಧಿಸಿ ಕಾರಜೋಳ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಕೋವಿಡ್–19 ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕಲಬುರ್ಗಿ ಮತ್ತು ಬಾಗಲಕೋಟೆ ಜಿಲ್ಲಾಡಳಿತಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆದೇಶ ಹೊರಡಿಸಿದ್ದಾರೆ.

ಇದಕ್ಕೆ ಪರ್ಯಾಯವಾಗಿ ಉಪನೊಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಕಾರ್ಯಗಳನ್ನು ನಡೆಸಲು ಮಾತ್ರ ಅನುಮತಿ ನೀಡುವಂತೆ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ‌ನೀಡಿದ್ದಾರೆ.

 ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೂ, ನಿಯಂತ್ರಣಕ್ಕೆ ಬಾರದಿರುವುದು ಆತಂಕಕಾರಿ ಸಂಗತಿ. ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ಜನರಲ್ಲಿ ಹೆಚ್ಚಾಗಿ ಕೋವಿಡ್ ಕಾಣಿಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮದುವೆ ಸಮಾರಂಭ ನಡೆಯಲು ಬಿಡಬೇಡಿ ಎಂದು ಎರಡೂ ಜಿಲ್ಲೆಗಳ ಉಸ್ತುವಾರಿ ಹೊತ್ತಿರುವ ಕಾರಜೋಳ ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು