ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತಿಬ್ಬರು ಬಲಿ: ಮೃತರ ಸಂಖ್ಯೆ 8ಕ್ಕೆ ಏರಿಕೆ

Last Updated 13 ಏಪ್ರಿಲ್ 2020, 21:29 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಭಾನುವಾರ ರಾತ್ರಿ ದಾಖಲಾಗಿದ್ದ 65 ವರ್ಷದ ವ್ಯಕ್ತಿಯೊಬ್ಬರು ಮೃತರಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, 'ನಿನ್ನೆ ರಾತ್ರಿ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ದಾಖಲಾದ 65 ವರ್ಷದ ವ್ಯಕ್ತಿಯೊಬ್ಬರು ಇಂದು ಮೃತರಾಗಿದ್ದಾರೆ. ಇವರು ಹೃದ್ರೋಗದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಇವರನ್ನು ಪ್ರತ್ಯೇಕ ಚಿಕಿತ್ಸಾ ಕೇಂದ್ರದಲ್ಲಿ ದಾಖಲಿಸಿ, ಕೋವಿಡ್‌-19 ಪರೀಕ್ಷೆ ಮಾಡಲಾಗಿದ್ದು, ವರದಿಯಲ್ಲಿ ಸೋಂಕು ದೃಢಪಟ್ಟಿದೆ' ಎಂದು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಮತ್ತೊಂದು ಸಾವು

ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ 55 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಈ ವ್ಯಕ್ತಿಯು ಉಸಿರಾಟದ ತೊಂದರೆಯಿಂದಾಗಿ ಏಪ್ರಿಲ್‌ 7 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಇಬ್ಬರು ವ್ಯಕ್ತಿಗಳು ಬಲಿಯಾದಂತಾಗಿದೆ.

ಕಲಬುರಗಿಯ ಇಎಸ್‌ಐ ಆಸ್ಪತ್ರೆ ಕಲಬುರ್ಗಿಯಲ್ಲಿ ಕೊವಿಡ್‌-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರು ನಿಧನ ಹೊಂದಿದ್ದಾರೆ. ಅವರು ತೀವ್ರ ಉಸಿರಾಟದ ತೊಂದರೆಯಿಂದಾಗಿ ಏಪ್ರಿಲ್ 7ರಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT