ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾರ್ಯಕರ್ತರಿಗೆ ರಕ್ಷಣೆ ವಿಚಾರ: ರಾಜ್ಯ ಸರ್ಕಾರದಿಂದ ಹೈಕೋರ್ಟ್‌ಗೆ ಮಾಹಿತಿ

Last Updated 24 ಏಪ್ರಿಲ್ 2020, 15:03 IST
ಅಕ್ಷರ ಗಾತ್ರ


ಬೆಂಗಳೂರು: ಕೋವಿಡ್-19 ಕರ್ತವ್ಯಕ್ಕೆ ತೆರಳುವ ಆರೋಗ್ಯ ಕಾರ್ಯರ್ತರು ಹಾಗೂ ಇತರ ಸಿಬ್ಬಂದಿ ಜೊತೆಗೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸಶಸ್ತ್ರ ಪೋಲಿಸರನ್ನು ನಿಯೋಜಿಸುವ ಬಗ್ಗೆ ರಾಜ್ಯದ ಎಲ್ಲಾ ಪೋಲಿಸ್ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಲಿಖಿತ ಹೇಳಿಕೆ ಸಲ್ಲಿಸಿದರು.

'ಆರೋಗ್ಯ ಕಾರ್ಯಕರ್ತರು ಹಾಗೂ ಸಿಬ್ಬಂದಿ ಕೋವಿಡ್-19 ಕರ್ತವ್ಯಕ್ಕೆ ತೆರಳುವ ಸ್ಥಳದ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆಯಲಾಗುತ್ತದೆ. ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಸಶಸ್ತ್ರ ಪೋಲಿಸರನ್ನು ನಿಯೋಜಿಸುವ ಬಗ್ಗೆ ಎಲ್ಲಾ ಪೋಲಿಸ್ ಠಾಣೆಗಳಿಗೆ ಸೂಚಿಸಲಾಗಿದೆ' ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.

'ಪಾದರಾಯನಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಜೆ ನಗರ ಠಾಣೆಯಲ್ಲಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. 126 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ' ಎಂದು ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT