ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಆದೇಶಕ್ಕೆ ಬೆಲೆ ಕೊಡದೆ ಶುಲ್ಕ ವಸೂಲಿಗೆ ಮುಂದಾದ ಖಾಸಗಿ ಶಾಲೆಗಳು

Last Updated 30 ಮಾರ್ಚ್ 2020, 5:50 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಆದೇಶದವರೆಗೆ ಪ್ರವೇಶ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಖಾಸಗಿ ಶಾಲೆಗಳಿಗೆ ಸಾರ್ವಜನಿಕ ಸೂಚನಾ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ. ಇದರ ಹೊರತಾಗಿಯೂ ನಗರದ ಕೆಲ ಖಾಸಗಿ ಶಾಲೆಗಳು 2020-21ರ ಶೈಕ್ಷಣಿಕ ವರ್ಷಕ್ಕೆ ಬೋಧನಾ ಶುಲ್ಕ ಪಾವತಿಸುವಂತೆ ಪೋಷಕರ ಮೇಲೆ ಒತ್ತಡ ಹೇರುತ್ತಿವೆ.

ಈ ಕೆಲ ಶಿಕ್ಷಣ ಸಂಸ್ಥೆಗಳನ್ನು ಸಚಿವರು ಮತ್ತು ಚುನಾಯಿತ ಪ್ರತಿನಿಧಿಗಳು ನಡೆಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಈ ರೀತಿ ನಡೆದುಕೊಳ್ಳುತ್ತಿರುವ ವಿಚಾರದ ಬಗ್ಗೆ ಹಲವು ಪೋಷಕರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ದೂರು ನೀಡಿದ್ದಾರೆ.

ಪೋಷಕರೊಬ್ಬರು ನೀಡಿದ ದೂರಿನಲ್ಲಿ, 'ಬನಶಂಕರಿಯ ಸಿಬಿಎಸ್‌ಇ ಶಾಲೆಯೊಂದರಲ್ಲಿ ನಮ್ಮ ಮಗು ಓದುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಶಾಲೆಗಳು 2020-21ರ ಅವಧಿಯ ಶುಲ್ಕವನ್ನು ಸಂಗ್ರಹಿಸುವಂತಿಲ್ಲ ಎಂದು ಮಾಧ್ಯಮಗಳ ಮೂಲಕ ನಮಗೆ ತಿಳಿಯಿತು. ಆದರೆ, ಏ.15ರ ಒಳಗೆ ಶುಲ್ಕ ಭರಿಸಬೇಕೆಂದು ಶಾಲೆಯಿಂದ ನಮಗೆ ಸಂದೇಶ ಮತ್ತು ಇ-ಮೇಲ್‌ಗಳು ಬರುತ್ತಿವೆ. ದಯಮಾಡಿ ಈ ಸಮಸ್ಯೆಯ ಮೇಲೆ ಬೆಳಕು ಚೆಲ್ಲಿ' ಎಂದು ಸಚಿವ ಸುರೇಶ್‌ ಕುಮಾರ್‌ ಅವರನ್ನು ಕೋರಲಾಗಿದೆ.

ಕೋವಿಡ್- 19 ಹಿನ್ನೆಲೆಯಲ್ಲಿ ಸಿಬಿಎಸ್‌ಇ, ಐಸಿಎಸ್‌ಇ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಎಲ್ಲಾ ಶಾಲೆಗಳಿಗೆ ಮುಂದಿನ ಆದೇಶ ನೀಡುವವರೆಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT