ಬುಧವಾರ, ಮೇ 27, 2020
27 °C

ಆರೋಗ್ಯ ಸಚಿವ ಶ್ರೀರಾಮುಲು ಜೊತೆ ಭಿನ್ನಾಭಿಪ್ರಾಯವಿಲ್ಲ: ಡಾ.ಕೆ. ಸುಧಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಸ್ಪಷ್ಟ ಪಡಿಸಿದ್ದಾರೆ. 

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ನನ್ನ ಮತ್ತು ಆರೋಗ್ಯ ಸಚಿವರಾದ ಶ್ರೀರಾಮುಲು ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಕೊರೊನಾ ವಿರುದ್ಧ ಟೊಂಕ ಕಟ್ಟಿ ಹೋರಾಡುತ್ತಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ. ನಾನು ಮತ್ತು ಶ್ರೀರಾಮುಲು ಅವರು ಅಣ್ಣ-ತಮ್ಮಂದಿರಂತೆ ಈ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ' ಎಂದಿದ್ದಾರೆ.

ಶ್ರೀರಾಮುಲು ಮತ್ತು ತಮ್ಮ ನಡುವೆ ಮುನಿಸು ಕಾಣಿಸುಕೊಂಡಿದೆ ಎನ್ನುವ ವರದಿಗಳನ್ನು ತಳ್ಳಿಹಾಕಿರುವ ಡಾ. ಸುಧಾಕರ್‌, 'ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮುನಿಸಿನ ರಾಜಕೀಯ ಮಾಡಲು ನಾವು ಸಣ್ಣ ಮಕ್ಕಳಲ್ಲ. ನಮಗೆ ನಮ್ಮದೇ ಆದ ಜವಾಬ್ದಾರಿಗಳಿವೆ. ಈ ಸುಳ್ಳು ಸುದ್ದಿಗಳ  ಹಿಂದೆ ನೀಚ ರಾಜಕೀಯ ಷಡ್ಯಂತ್ರವಿದೆ' ಎಂದು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು