ಆರೋಪಿಗಳ ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಪಿಎಸ್ಐ ಮತ್ತು 37 ಸಿಬ್ಬಂದಿಯ ಗಂಟಲುದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ಜೊತೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ 14 ಜನ ಸಿಬ್ಬಂದಿ ಮತ್ತು ಇಬ್ಬರು ಪಿಎಸ್ಐ ಅವರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ.