ಶನಿವಾರ, ಜುಲೈ 24, 2021
22 °C

Covid-19 Karnataka Update | ಇಂದು 337 ಹೊಸ ಪ್ರಕರಣ; 230 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಜೂನ್‌ 18ರ ಸಂಜೆ 5 ಗಂಟೆಯಿಂದ ಜೂನ್‌ 19ರ ಸಂಜೆ 5ರ ವರೆಗೆ ಒಟ್ಟು 337 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,281 ಆಗಿದ್ದು, ಸಾವಿನ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಈವರೆಗೆ 5,210 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2,943 ಪ್ರಕರಣಗಳು ಸಕ್ರಿಯವಾಗಿವೆ.

ಇಂದು ಬೆಂಗಳೂರು ನಗರದಲ್ಲಿ 138 ಹೊಸ ಕೊರೊನಾ ಸೋಂಕು ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 982ಕ್ಕೆ ತಲುಪಿದೆ. 

ಕಲಬುರಗಿಯಲ್ಲಿ 52, ಬಳ್ಳಾರಿಯಲ್ಲಿ 37,  ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆಯಲ್ಲಿ 12, ಉಡುಪಿಯಲ್ಲಿ 11, ಬೀದರ್‌ನಲ್ಲಿ 10, ಮೈಸೂರು ಹಾಗೂ ಕೊಪ್ಪಳದಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆಯಾಗಿವೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು