ಶುಕ್ರವಾರ, ಆಗಸ್ಟ್ 6, 2021
23 °C
ಚಿಕಿತ್ಸೆ ಮತ್ತು ಪರೀಕ್ಷಾ ದರ ಸರ್ಕಾರದಿಂದಲೇ ನಿಗದಿ

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಪರೀಕ್ಷೆ ಮತ್ತು ಚಿಕಿತ್ಸೆಗೆ ಪಡೆಯಬೇಕಾದ ಶುಲ್ಕವನ್ನು ಸರ್ಕಾರವೇ ನಿಗದಿ ಮಾಡಲು ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌,  ‘ಖಾಸಗಿ ಆಸ್ಪತ್ರೆಗಳು  ತೆಗೆದುಕೊಳ್ಳಬೇಕಾದ ಪರೀಕ್ಷಾ ದರ, ಚಿಕಿತ್ಸಾ ದರವನ್ನು ಸರ್ಕಾರವೇ ನಿಗದಿಪಡಿಸಲಿದೆ. ಸುಲಿಗೆ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ
ಕ್ರಮ ಕೈಗೊಳ್ಳಲಾಗುವುದು. ರಾಜ್ಯದಾದ್ಯಂತ ಬಹುತೇಕ ಏಕರೂಪದ ಚಿಕಿತ್ಸಾ ದರ ನಿಗದಿಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು