ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಮತ್ತೆ ಮೂವರು ಸಾವು

Last Updated 12 ಜುಲೈ 2020, 14:59 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿನಿಂದಾಗಿ ಮತ್ತೆ ಮೂವರು ಮೃತರಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 12ಕ್ಕೆ ಏರಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಬ್ಬ ವೃದ್ಧೆ ಹಾಗೂ ಇಬ್ಬರು ಪುರುಷರು ಸಾವಿಗೀಡಾಗಿದ್ದಾರೆ.

ರೋಗಿ ಸಂಖ್ಯೆ 37,222 ಆಗಿರುವ 80 ವರ್ಷದ ಮಹಿಳೆ ತೀವ್ರ ಉಸಿರಾಟದ ತೊಂದರೆಯಿಂದ ಮೃತರಾಗಿದ್ದಾರೆ. ಅವರನ್ನು ಶನಿವಾರ ಮರಣ ನಂತರ ಅವರನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅವರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. ಇವರು ಇಲ್ಲಿನ ಶಿವಬಸವ ನಗರದವರು.

ರೋಗಿ ಸಂಖ್ಯೆ 37,223 ಆದ 57 ವರ್ಷದ ವ್ಯಕ್ತಿಗೂ ತೀವ್ರ ಉಸಿರಾಟದ ತೊಂದರೆ ಇತ್ತು. ಅವರನ್ನು ಜುಲೈ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಭಾನುವಾರ ಕೊನೆ ಉಸಿರೆಳೆದಿದ್ದಾರೆ. ಇವರು ಇಲ್ಲಿನ ವಿಜಯನಗರದವರು.

ರೋಗಿ ಸಂಖ್ಯೆ 25,558 ಆದ 62 ವರ್ಷದ ವ್ಯಕ್ತಿ (ಅಥಣಿ ತಾಲ್ಲೂಕಿನವರು) ಕೂಡ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರನ್ನು ಜುಲೈ 5ರಂದು ಆಸ್ಪತ್ರೆಗೆ ಸೇರಿಸಲಾಗಿತ್ತು. 9 ಮಂದಿ ಐಸಿಯುನಲ್ಲಿದ್ದಾರೆ.

ಕೌಜಲಗಿ ವರದಿ:

ಇಲ್ಲಿನ ಕಟ್ಟಿ ಬಸವೇಶ್ವರ ದೇವಸ್ಥಾನ ಸಮೀಪದ 49 ವರ್ಷದ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲವು ದಿನಗಳ ಹಿಂದೆ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ವರದಿ ಬಂದಿದೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕು ದೃಢವಾಗುತ್ತಿದ್ದಂತೆಯೇ ವ್ಯಕ್ತಿಯ ಮನೆ ಬಳಿ 50 ಮೀ. ವ್ಯಾಪ್ತಿಯ ರಸ್ತೆಗಳನ್ನು ಸ್ವತಃ ಗ್ರಾಮಲೆಕ್ಕಿಗರ ಮುಂದೆ ನಿಂತು ಸೀಲ್‌ಡೌನ್‌ ಮಾಡಿಸಿದ್ದರು. ಆದರೆ, ಕೆಲವೇ ಗಂಟೆಗಳಲ್ಲಿ ರಸ್ತೆಗಳನ್ನು ಮುಕ್ತಗೊಳಿಸಲಾಗಿದೆ.

ಮೋಳೆ ವರದಿ:

‘ಕಾಗವಾಡ ತಾಲ್ಲೂಕಿನ ಜುಗೂಳದ ಪತಿ (40), ಪತ್ನಿ (32) ಹಾಗೂ ಕೃಷ್ಣಾ-ಕಿತ್ತೂರ ಗ್ರಾಮದ 60 ವರ್ಷದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದೆ. ಅವರನ್ನು ಭಾನುವಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ’ ಎಂದು ತಹಶೀಲ್ದಾರ್‌ ಪರಿಮಳಾ ದೇಶಪಾಂಡೆ ತಿಳಿಸಿದರು.

ದಂಪತಿ ಮುಂಬೈನಲ್ಲಿ ಕೆಲಸದಲ್ಲಿರು. ಅಲ್ಲಿ ಕೊರೊನಾ ಹೆಚ್ಚಾದ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲ್ಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಪತ್ನಿ ಮನೆಗೆ ಕಳೆದ ತಿಂಗಳು ಬಂದು, 14 ದಿನಗಳ ಸಾಂಸ್ಥಿಕ ಕಾರಂಟೈನ್ ಮುಗಿಸಿ ಕಳೆದ ವಾರ ಜುಗೂಳಕ್ಕೆ ಬಂದಿದ್ದರು. ಜುಲೈ 4ರಂದು ಇಬ್ಬರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 12 ಮಂದಿಯನ್ನೂ ಸಾಂಸ್ಥಿಕ ಕಾರಂಟೈನ್ ಮಾಡಲಾಗಿದೆ.

ಕೃಷ್ಣಾ-ಕಿತ್ತೂರದ ವೃದ್ಧ ಉಸಿರಾಟದ ತೊಂದರೆ ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. ಅವರನ್ನು ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 13 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ 29 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಸೋಂಕು ಕಾಣಿಸಿಕೊಂಡ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

ನೇಸರಗಿ ವರದಿ:

ಪೇಟೆ ಓಣಿಯ 52 ವರ್ಷದ ವ್ಯಕ್ತಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಅವರು ಅಕ್ಕಿ ವ್ಯಾಪಾರಕ್ಕೆಂದು ತೆಲಂಗಾಣಕ್ಕೆ ಹೋಗಿಬಂದಿದ್ದರು ಎನ್ನಲಾಗಿದೆ. ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡೆಂಗಿ ಪಾಸಿಟಿವ್ ಬಂದಿತ್ತು. ನಂತರ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಎಂದು ತಿಳಿದುಬಂದಿದೆ.

‘ಸೋಂಕಿತ ವ್ಯಕ್ತಿಯ ಕುಟುಂಬದವರು ಹಾಗೂ ಸಂಪರ್ಕಕ್ಕೆ ಬಂದವರ ಗಂಟಲು ದ್ರವದ ಮಾದರಿ ಸಂಗ್ರಹಿಸಲು ಕ್ರಮ ವಹಿಸಲಾಗಿದೆ. ಪೇಟೆ ಓಣಿಯನ್ನು ಸೀಲ್‌ಡೌನ್ ಮಾಡಿ, ಸೋಕು ನಿವಾರಕ ಸಿಂಪಡಿಸಲಾಗಿದೆ’ ಎಂದು ಪಿಡಿಒ ಸೌಮ್ಯಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT