ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 408 ಕೋವಿಡ್–19 ಪ್ರಕರಣ; ಒಂದೇ ದಿನ ವಿಜಯಪುರದಲ್ಲಿ 11 ಮಂದಿಗೆ ಸೋಂಕು

Last Updated 20 ಏಪ್ರಿಲ್ 2020, 12:17 IST
ಅಕ್ಷರ ಗಾತ್ರ

ಬೆಂಗಳೂರು: ಏಪ್ರಿಲ್‌ 19ರ ಸಂಜೆ 5ರಿಂದ ಏಪ್ರಿಲ್‌ 20ರ ಸಂಜೆ 5ರ ವರೆಗೂ ರಾಜ್ಯದಲ್ಲಿ ಕೋವಿಡ್‌–19 ದೃಢಪಟ್ಟ 18 ಹೊಸ ಪ್ರಕರಣಗಳು ದಾಖಲಾಗಿವೆ. ವಿಜಯಪುರ ಒಂದರಲ್ಲಿಯೇ 11 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಈವರೆಗೂ ಒಟ್ಟು 408 ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ದಾಖಲಾಗಿದ್ದು, ಸಾವಿಗೀಡಾದವರ ಸಂಖ್ಯೆ 16 ಮುಟ್ಟಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 280 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 112 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲಬುರ್ಗಿಯ ಐವರು, ವಿಜಯಪುರದ 11 ಮಂದಿ, ಬೀದರ್‌ ಮತ್ತು ಗದಗದ ತಲಾ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಈವರೆಗೂ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 89 ಪ್ರಕರಣಗಳು ದಾಖಲಾಗಿವೆ. ಮೈಸೂರಿನಲ್ಲಿ 84, ಬೆಳಗಾವಿಯಲ್ಲಿ 42, ವಿಜಯಪುರದಲ್ಲಿ 32 ಹಾಗೂ ಕಲಬುರ್ಗಿಯಲ್ಲಿ 27 ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT