ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂತರರಾಷ್ಟ್ರೀಯ ಬುಕ್ಕಿಗಳು ಶಾಮೀಲು’

Last Updated 29 ನವೆಂಬರ್ 2019, 19:37 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರೀಮಿಯರ್ ಲೀಗ್‌ನಲ್ಲಿ (ಕೆಪಿಎಲ್‌) ನಡೆದಿದೆ ಎನ್ನಲಾದ ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್‌ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಅಂತರರಾಷ್ಟ್ರೀಯ ಬುಕ್ಕಿಗಳ ಮೇಲೂ ಅನುಮಾನ ವ್ಯಕ್ತಪಡಿಸಿದ್ದಾರೆ.

‘ಕೆಪಿಎಲ್‌ ಮ್ಯಾಚ್ ಫಿಕ್ಸಿಂಗ್ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನು ಹಲವರಿಗೆ ವಿಚಾರಣೆಗೆ ಬರುವಂತೆ ನೋಟಿಸ್‌ ನೀಡಲಾಗಿದೆ’ ಎಂದು ಸಿಸಿಬಿಯ ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

‘ಮ್ಯಾಚ್ ಫಿಕ್ಸಿಂಗ್ ಜಾಲ ದೊಡ್ಡ ಮಟ್ಟದಲ್ಲಿ ಹರಡಿರುವಂತೆ ಕಾಣುತ್ತಿದೆ. ಕೆಲ ಆಟಗಾರರು ಹಾಗೂ ಕೋಚ್‌ಗಳ ಬಗ್ಗೆ ಮಾಹಿತಿ ನೀಡುವಂತೆ ಬಿಸಿಸಿಐ ಹಾಗೂ ಐಸಿಸಿ ಅಧಿಕಾರಿಗಳನ್ನೂ ಕೋರಿದ್ದೇವೆ. ಅಂತರಾಷ್ಟ್ರೀಯ ಬುಕ್ಕಿಗಳ ಮೇಲೂ ಅನುಮಾನವಿದ್ದು, ಅವರ ಮೇಲೂ ಕಣ್ಣಿಟ್ಟಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT