ಹಲ್ಲೆ ಪ್ರಕರಣ: ಆರೋಪಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ

5

ಹಲ್ಲೆ ಪ್ರಕರಣ: ಆರೋಪಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ

Published:
Updated:

ಬೆಂಗಳೂರು: ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಮೂರನೇ ಆರೋಪಿ ಕೃಷ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಎಂ.ಎಸ್. ಶ್ಯಾಮಸುಂದರ್, ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 6ಕ್ಕೆ ಮುಂದೂಡಿದೆ.2018ರ ಫೆಬ್ರುವರಿ 17ರಂದು ರಾತ್ರಿ ಮೊಹಮದ್ ನಲಪಾಡ್ ಮತ್ತು ಅವರ ಸಹಚರರು ನಗರದ ಫರ್ಜಿ ಕಫೆಯಲ್ಲಿ ವಿದ್ವತ್
ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಕೃಷ್ಣ ತಲೆ ಮರೆಸಿಕೊಂಡಿರುವ ಆರೋಪಿಯಾಗಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !