‘ಚುನಾವಣೆ: ಹಿಂದುಳಿದ ವರ್ಗಗಳಿಗೆ ಅನ್ಯಾಯ’

ಶುಕ್ರವಾರ, ಏಪ್ರಿಲ್ 19, 2019
22 °C
rajakiya news

‘ಚುನಾವಣೆ: ಹಿಂದುಳಿದ ವರ್ಗಗಳಿಗೆ ಅನ್ಯಾಯ’

Published:
Updated:

ಬೆಂಗಳೂರು: ‘ಈ ಬಾರಿಯ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಜಕೀಯ ಪಕ್ಷಗಳು, ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಿಲ್ಲ. ಈ ಧೋರಣೆ ಖಂಡನೀಯ’ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಹಾಗೂ ಒಂದು ಪ್ರಾದೇಶಿಕ ಪಕ್ಷವಿದೆ. ಅವುಗಳ ಅಭ್ಯರ್ಥಿಗಳ ಪಟ್ಟಿಯನ್ನು ನೋಡಿದರೆ ದಿಗ್ಭ್ರಮೆ ಆಗುತ್ತದೆ’ ಎಂದರು.

‘ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯ 27 ಅಭ್ಯರ್ಥಿಗಳಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ–1 ಹಾಗೂ ಪ್ರವರ್ಗ–2ರ ಒಬ್ಬ ಅಭ್ಯರ್ಥಿಯೂ ಇಲ್ಲ. ಇದು ದುರಂತದ ಸಂಗತಿ. ಚುನಾವಣೆಗೆ ಯಾವುದೇ ಪಕ್ಷದಿಂದ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಮುದಾಯದವರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಕೋರಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !