ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಸಾಲ: ಅಸಲು ಕಟ್ಟಿದರೆ ಬಡ್ಡಿ ಮನ್ನಾ

Last Updated 4 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕೃಷಿ ಉದ್ದೇಶಕ್ಕೆ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲ ಪಡೆದಿರುವ ರೈತರು ಮಾರ್ಚ್‌ 31ರೊಳಗೆ ಅಸಲು ಪಾವತಿಸಿದರೆ ಬಡ್ಡಿ ಮತ್ತು ಸುಸ್ತಿ ಬಡ್ಡಿ ಮನ್ನಾ ಮಾಡುವ ಪ್ರಮುಖ ನಿರ್ಣಯವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್‌ (ಪಿಎಲ್‌ಡಿ), ಸಹಕಾರ ಬ್ಯಾಂಕ್‌ಗಳಲ್ಲಿ ಸಾಲ ಪಡೆದ ರೈತರಿಗೆ ಈ ಬಡ್ಡಿ ಮನ್ನಾ ಸೌಲಭ್ಯ ಅನ್ವಯವಾಗಲಿದೆ. ಬಡ್ಡಿ ಮನ್ನಾ ಮಾಡುವ ಉದ್ದೇಶಕ್ಕೆ ತತ್‌ಕ್ಷಣವೇ ಅಪೆಕ್ಸ್‌ ಬ್ಯಾಂಕ್‌ಗೆ ₹466 ಕೋಟಿ ಬಿಡುಗಡೆ ಮಾಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದುಸಹಕಾರ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT