ಶುಕ್ರವಾರ, ಅಕ್ಟೋಬರ್ 18, 2019
28 °C
ವರದಿ ಪರಿಣಾಮ

‘ಸೈಬರ್ ವಿಧಿವಿಜ್ಞಾನ ಕೇಂದ್ರ’ ನಿರ್ಮಾಣ ಟೆಂಡರ್ ಅಕ್ರಮ: ತನಿಖೆಗೆ ಬೊಮ್ಮಾಯಿ ಆದೇಶ

Published:
Updated:

ಬೆಂಗಳೂರು: ರಾಜ್ಯದ ಎಲ್ಲ ಕಮಿಷನರೇಟ್‌ ಹಾಗೂ ಜಿಲ್ಲೆಗಳಲ್ಲಿ ಪ್ರತ್ಯೇಕ ‘ಸೈಬರ್ ವಿಧಿವಿಜ್ಞಾನ ಕೇಂದ್ರ’ ನಿರ್ಮಾಣಕ್ಕಾಗಿ ಕರೆಯಲಾಗಿದ್ದ ಟೆಂಡರ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದ ಅಕ್ರಮದ ಕುರಿತು ‘ಸೈಬರ್ ಟೆಂಡರ್ ಅಕ್ರಮ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ಮಂಗಳವಾರ ವಿಶೇಷ ವರದಿ ಪ್ರಕಟಿಸಿತ್ತು. ಅದಕ್ಕೆ ಪ್ರತಿಕ್ರಿಯಿಸಿರುವ ಬಸವರಾಜ ಬೊಮ್ಮಾಯಿ, ‘ಅಧಿಕಾರಿಗಳ ಜತೆ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಇಲಾಖೆ ಮುಖ್ಯಸ್ಥರಿಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

‘ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ’ ಎಂದು ಅವರು ತಿಳಿಸಿದರು.

ಅತಿ ಕಡಿಮೆ ದರ ನಮೂದಿಸಿದ (ಎಲ್‌–1) ಕೇಂದ್ರ ಸರ್ಕಾರ ಸ್ವಾಮ್ಯದ ಎಚ್‌ಎಎಲ್‌ (ಹಿಂದೂಸ್ಥಾನ್‌ ಏರೊನಾಟಿಕ್ಸ್‌ ಲಿಮಿಟೆಡ್‌) ಸಹಭಾಗಿತ್ವದ ಕಂಪನಿ ‘ಬಿಎಇಎಚ್‌ಎಎಲ್‌ ಸಾಫ್ಟ್‌ವೇರ್‌’ ಬದಲು, ಖಾಸಗಿಯವರ ಒಡೆತನದ ‘ಸ್ಮಾರ್ಟ್‌ ಚಿಪ್’ ಕಂಪನಿಗೆ ಕಾರ್ಯಾದೇಶ ನೀಡಲಾಗಿದೆ.

Post Comments (+)