ಗುರುವಾರ , ಡಿಸೆಂಬರ್ 12, 2019
26 °C

ಮಹಿಳಾ ಸಬಲೀಕರಣಕ್ಕೆ ಸೈಕಲ್ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಹಿಳಾ ಸಬಲೀಕರಣದ ಸಂದೇಶ ಸಾರಲು ಬೆಳಗಾವಿಯಿಂದ ಬೆಂಗಳೂರಿಗೆ ಹೊರಟ ಕೆಎಸ್‌ಆರ್‌ಪಿ ಸಿಬ್ಬಂದಿ ಹಾಗೂ ಐಎಸ್‌ಐಪಿಎಸ್ ಅಧಿಕಾರಿಗಳ ಸೈಕಲ್‌ ಜಾಥಾಕ್ಕೆ ಹುಬ್ಬಳ್ಳಿಯಲ್ಲಿ ಪೊಲೀಸ್ ಕಮಿಷನರ್ ಎಂ.ಎನ್‌. ನಾಗರಾಜ ಗುರುವಾರ ಹಸಿರು ನಿಶಾನೆ ತೋರಿದರು.

ಎಡಿಜಿಪಿ ಭಾಸ್ಕರ್‌ ರಾವ್‌ ಮಾತನಾಡಿ, ಮಹಿಳಾ ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸಲು ಈ ಜಾಥಾ ಆಯೋಜಿಸಲಾಗಿದೆ. ಕೆಎಸ್‌ಆರ್‌ಪಿಯ 46 ಸಿಬ್ಬಂದಿ ಹಾಗೂ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದಾರೆ. ಜಾಥಾಕ್ಕೆ ಜನರಿಂದ ಹಾಗೂ ಸಂಘ ಸಂಸ್ಥೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.

'ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಾದರೆ ದೇಶ ಪ್ರಗತಿ ಕಾಣಲಿದೆ. ಮುಖ್ಯವಾಗಿ ನಾವು ಶಿಕ್ಷಣದ ‌ಮಹತ್ವ ಅವಕಾಶ ಹಾಗೂ ಸವಾಲುಗಳ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ‌. ದಾರಿ ಮಧ್ಯದಲ್ಕಿ ಶಾಲೆ ಹಾಗೂ ಖಾಸಗಿ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇವೆ' ಎಂದು ಐಎಎಸ್‌ ಅಧಿಕಾರಿ ನಂದಿನಿ ಹೇಳಿದರು.

ಡಿಸಿಪಿಗಳಾದ ರವೀಂದ್ರ ಗಡಾದಿ, ಬಿ.ಎಸ್. ನೇಮಗೌಡ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು