ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂಡಮಾರುತ: ರಾಜ್ಯದಲ್ಲಿ ಮಳೆ ಸಾಧ್ಯತೆ

Last Updated 27 ಏಪ್ರಿಲ್ 2019, 6:01 IST
ಅಕ್ಷರ ಗಾತ್ರ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ ಮತ್ತು ತಮಿಳುನಾಡು ಕಡಲ ತೀರದಲ್ಲಿ ಚಂಡಮಾರುತ ಬೀಸಲಿದೆ. ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಗಂಟೆಗೆ 100 ರಿಂದ 115 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾನುವಾರ ಅಥವಾ ಸೋಮವಾರ ಶ್ರೀಲಂಕಾ, ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸಲಿದೆ. ಕೇರಳದ ಕಡಲ ತೀರದಲ್ಲೂ ಪ್ರಬಲ ಗಾಳಿ ಬೀಸಲಿದ್ದು, ಕರ್ನಾಟಕ ಕರಾವಳಿ ತೀರದಲ್ಲೂ ಭಾರಿ ಮಳೆ ಆಗುವ ಸಾಧ್ಯತೆ ಇದೆ.

ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತ ಚಂಡಮಾರುತಕ್ಕೆ ಕಾರಣವೆಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT