ಬುಧವಾರ, ಮಾರ್ಚ್ 3, 2021
22 °C

ಬೆಂಗಳೂರಿಗೆ ದೌಡಾಯಿಸಿದ ಡಿ.ಕೆ.ಶಿವಕುಮಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಶಾಸಕರ ರಾಜೀನಾಮೆ ಸುದ್ದಿ ತಿಳಿಯುತ್ತಲೇ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಶನಿವಾರ ನಡೆಯಬೇಕಿದ್ದ ಜನಸಂಪರ್ಕ ಸಭೆ ರದ್ದು ಮಾಡಿ ಕನಕಪುರದಿಂದ ಬೆಂಗಳೂರಿಗೆ ದೌಡಾಯಿಸಿದರು.

ಈ ಸಂದರ್ಭ ಪತ್ರಕರ್ತರ ಜೊತೆ‌ ಮಾತನಾಡಿದ ಅವರು 'ಸರ್ಕಾರ ಉಳಿಸಿಕೊಳ್ಳಲು ನಾವು ಸಿದ್ದರಿದ್ದೇವೆ. ಅಗತ್ಯ ಬಿದ್ದಲ್ಲಿ ಕೆಲವರು ಸಚಿವ ಸ್ಥಾನವನ್ನೂ ತ್ಯಾಗ ಮಾಡುತ್ತಾರೆ' ಎಂದು ಹೇಳಿದರು.

'ಇಂದು ಸಂಜೆ ಬೆಂಗಳೂರಿನಲ್ಲಿ ನಮ್ಮ ಶಾಸಕರು, ಸಚಿವರ ಜೊತೆ ಸಭೆ ನಡೆಸುತ್ತೇವೆ. ಬಿಜೆಪಿಯ ಕೆಲವರು ಸರ್ಕಾರ ಉರುಳಿಸಲು ಪ್ರಯತ್ನ ನಡೆಸುತ್ತಲೇ ಇದ್ದಾರೆ. ಆದರೆ ಅದಕ್ಕೆ ಅವಕಾಶ ನೀಡುವುದಿಲ್ಲ' ಎಂದರು.

ಇದನ್ನೂ ಓದಿ: ಮದ್ದಿಲ್ಲದ ರೋಗ; ಮಧ್ಯಂತರ ರಾಗ​

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು