ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್‌ಗೆ ಜಾಮೀನು: ಹಲವರ ಪ್ರತಿಕ್ರಿಯೆಗಳು

Last Updated 23 ಅಕ್ಟೋಬರ್ 2019, 12:25 IST
ಅಕ್ಷರ ಗಾತ್ರ

ಬೆಂಗಳೂರು:ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದಕ್ಕೆ ಹಲವಾರು ರಾಜಕಾರಣಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

'ಡಿ.ಕೆ ಶಿವಕುಮಾರ್ ಅವರಿಗೆ ಜಾಮೀನು ಸಿಕ್ಕಿರುವುದು ಸಂತೋಷದ ವಿಚಾರವಾಗಿದೆ. ಕಳೆದ ಸೋಮವಾರ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿ ಬಂದಿದ್ದೆ' ಎಂದುಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ‘ ಡಿ.ಕೆ.ಶಿವಕುಮಾರ್‌ ಅವರಿಗೆ ನನ್ನ ಶುಭ ಹಾರೈಕೆಗಳು, ಅವರು ಕಾಂಗ್ರೆಸ್‌ ಶಕ್ತಿಯಾಗಿ ಬೆಳೆಯಬೇಕು ಎಂದು ಟ್ವೀಟ್‌ ಮಾಡಿದ್ದಾರೆ.

ಕಳೆದ 50 ದಿನಗಳಿಂದ ಮಾನಸಿಕ ಹಿಂಸೆ ಅನುಭವಿಸಿದ್ದೆವು. ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದರಿಂದ ಸಂತೋಷವಾಗಿದೆ. ಇ.ಡಿ ಸುಪ್ರೀಂ ಕೋರ್ಟ್‌ಗೆ ಹೋದರೂ ನಾವು ಅಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದುಸಂಸದ ಡಿ.ಕೆ.ಸುರೇಶ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಶಿವಕುಮಾರ್‌ ಅವರಿಗೆ ಜಾಮೀನು ನೀಡಿರುವುದು ಸಂತಸದ ವಿಚಾರ. ದೆಹಲಿ ನ್ಯಾಯಾಲಯದ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಈ ತೀರ್ಮಾನದಿಂದ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಟ್ವೀಟ್‌ ಮಾಡಿದ್ದಾರೆ.

ದೆಹಲಿ ಹೈಕೋರ್ಟ್‌ ತೀರ್ಪನ್ನು ಸ್ವಾಗತಿಸುತ್ತೇನೆ, ಮುಂದಿನ ದಿನಗಳಲ್ಲಿ ಡಿ.ಕೆ.ಶಿವಕುಮಾರ್‌ ಅವರಿಗೆ ನ್ಯಾಯಾ ಸಿಗಲಿದ್ದು ಅವರು ಆರೋಪ ಮುಕ್ತರಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮಾಡಿದ್ದಾರೆ.

ದ್ವೇಷ ರಾಜಕಾರಣದ ಉದ್ದೇಶದಿಂದ ಪ್ರಕರಣವು ತನಿಖಾ ಹಂತದಲ್ಲಿರುವಾಗಲೇಡಿ.ಕೆ ಶಿವಕುಮಾರ್ ಅವರನ್ನು ಬಂಧಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಲಾಗಿತ್ತು. ಅವರಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ದೊರೆತ ಜಯ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT