ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್ ಪದಗ್ರಹಣ: ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮ

Last Updated 2 ಜುಲೈ 2020, 7:02 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್‌ ಅಧಿಕಾರ ಸ್ವೀಕರಿಸುತ್ತಿರುವ ಕ್ಷಣವನ್ನು ಕಾಂಗ್ರೆಸ್‌ ಕಾರ್ಯಕರ್ತರು ಹಬ್ಬದಂತೆ ಆಚರಿಸುತ್ತಿದ್ದಾರೆ. ನಗರದ ಬೀದಿ–ಬೀದಿಗಳಲ್ಲಿ ಕಾಂಗ್ರೆಸ್‌ ಬಾವುಟಗಳು ರಾರಾಜಿಸುತ್ತಿವೆ. ಬಿಬಿಎಂಪಿಯ ಕಾಂಗ್ರೆಸ್‌ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ, ಈ ಸಮಾರಂಭವನ್ನು ಆನ್‌ಲೈನ್‌ನಲ್ಲಿಯೇ ವೀಕ್ಷಿಸಲು ವ್ಯವಸ್ಥೆ ಮಾಡಿದ್ದಾರೆ. ಅಲ್ಲಲ್ಲಿ ಎಲ್‌ಇಡಿ ಪರದೆಗಳನ್ನು ಹಾಕಲಾಗಿದೆ. ಟಿವಿಗಳನ್ನು ಅಳವಡಿಸಲಾಗಿದೆ.

ಶಿವಕುಮಾರ್‌ ಅವರ ಸಾಧನೆಗಳನ್ನು ಬಿಂಬಿಸುವ ಆಡಿಯೊ–ವಿಡಿಯೊಗಳನ್ನು ಪ್ರದರ್ಶಿಸಲಾಗುತ್ತಿದೆ. ರಾಜ್ಯದಾದ್ಯಂತ ಸ್ಥಳೀಯ ಕಾಂಗ್ರೆಸ್‌ ಕಚೇರಿಗಳಲ್ಲಿಯೂ ಕಾರ್ಯಕ್ರಮ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. 7,800ಕ್ಕೂ ಹೆಚ್ಚು ಸ್ಥಳಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಜನ, ಡಿಜಿಟಲ್‌ ಮತ್ತು ಝೂಮ್‌ ಸಂವಾದದ ಮೂಲಕ ಈ ‘ಪ್ರತಿಜ್ಞಾ ದಿನ’ ಕಾರ್ಯಕ್ರಮದಲ್ಲಿ ಜನ ಪಾಲ್ಗೊಂಡಿದ್ದಾರೆ.

ತಾಲ್ಲೂಕು, ಹೋಬಳಿಗಳಲ್ಲೂ ಸಂಭ್ರಮ

ದೊಡ್ಡ ಫ್ಲೆಕ್ಸ್‌, ಬ್ಯಾನರ್‌ಗಳನ್ನು ಹಾಕುವ ಮೂಲಕ, ನೂತನ ಅಧ್ಯಕ್ಷರಾಗಿ ಕಾರ್ಯಕರ್ತರು ಶುಭ ಕೋರಿದ್ದಾರೆ. ಗ್ರಾಮ, ಹೋಬಳಿ, ಪಟ್ಟಣ, ನಗರಗಳಲ್ಲಿ ಕಾಂಗ್ರೆಸ್‌ ಬಾವುಟ, ಭಿತ್ತಿಪತ್ರಗಳು ರಾರಾಜಿಸುತ್ತಿವೆ.

ಹಳ್ಳಿ-ಹಳ್ಳಿಯಲ್ಲೂ ಕಾರ್ಯಕ್ರಮ ವೀಕ್ಷಣೆ

ರಾಮನಗರ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಕಾರ್ಯಕ್ರಮವನ್ನು ಜಿಲ್ಲೆಯ ಹಳ್ಳಿ-ಹಳ್ಳಿಯಲ್ಲೂ ವೀಕ್ಷಣೆಗೆ ಕಾಂಗ್ರೆಸ್ ಕಾರ್ಯಕರ್ತರು ವ್ಯವಸ್ಥೆ‌ ಮಾಡಿದ್ದಾರೆ.

ಪ್ರತಿ ಗ್ರಾ.ಪಂ. ಕೇಂದ್ರದಲ್ಲಿಯೂ ಶಾಮಿಯಾನ, ಟಿ.ವಿ. ಹಾಗು ಚೇರ್ ಗಳ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆ ಗರಿಷ್ಠ 50 ಮಂದಿಗೆ ವೀಕ್ಷಣೆಗೆ ಅವಕಾಶ ಇದ್ದು, ಜೂಮ್ ತಂತ್ರಾಂಶದ ಮೂಲಕ ನೇರ ಪ್ರಸಾರ ನಡೆದಿದೆ. 129ಕ್ಕೂ ಹೆಚ್ಚು ಕಡೆಗಳಲ್ಲಿ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT