ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಭಾಷಣ: ಸವಾಲು ಎದುರಿಸಲು ಹಿಂಜರಿಯಲ್ಲ, ತಪ್ಪು ಮಾಡಿದ್ದರೆ ಶಿಕ್ಷೆಗೆ ಸಿದ್ಧ

Last Updated 2 ಜುಲೈ 2020, 7:36 IST
ಅಕ್ಷರ ಗಾತ್ರ

ಬೆಂಗಳೂರು: ನಾನು ಯಾವ ತಪ್ಪೂ ಮಾಡಿಲ್ಲ. ಮಾಡಿದ್ದರೆ ಶಿಕ್ಷೆ ಅನುಭವಿಸಲು ಸಿದ್ಧ. ಆದರೆ ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ನಡೆದಿದೆ. ಇದಕ್ಕೆ ಜಗ್ಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಇಲ್ಲಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಪ್ರತಿಜ್ಞೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಪಕ್ಷಕ್ಕಾಗಿ ನಾನು ಅನೇಕ ತ್ಯಾಗ ಮಾಡಿದ್ದೇನೆ, ಪಕ್ಷವೂ ನನ್ನನ್ನು ಕಡೆಗಣಿಸಿದ್ದರೂ ನಾನು ಪಕ್ಷ ದ್ರೋಹ ಮಾಡಲಿಲ್ಲ. ನನ್ನ ಈ ನಿಷ್ಠೆಗೆ ಈಗ ಬೆಲೆ ಸಿಕ್ಕಿದೆ ಎಂದರು.

ನಾನು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ, ಆದರೆ ಸವಾಲಿನಿಂದ ಹಿಂದೆ ಸರಿಯುವವನಲ್ಲ. ನನಗೆ ಹಿಂಬಾಲಕರು ಬೇಡ. ಪಕ್ಷವನ್ನು ಬೂತು ಮಟ್ಟದಿಂದ ಕಟ್ಟಿ ಬೆಳೆಸುವುದು ನನ್ನ ಗುರಿ ಎಂದರು.

ನಾನು ಕನಕಪುರದ ಬಂಡೆ ಅಲ್ಲ. ವಿಧಾನಸೌಧದ ಮೆಟ್ಟಿಲುಗಳ ಚಪ್ಪಡಿ ಕಲ್ಲು ನಾನಾದರೆ ಸಾಕು, ಆ ಕಲ್ಲನ್ನು ಮೆಟ್ಟಿಕೊಂಡು ಹಲವಾರು ಮಂದಿ ವಿಧಾನಮಂಡಲಕ್ಕೆ ತೆರಳುವಂತಾಗಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT