ಹವಾಲಾ ದಂಧೆ ಕಟ್ಟುಕಥೆ: ಡಿ.ಕೆ. ಸುರೇಶ್‌

7

ಹವಾಲಾ ದಂಧೆ ಕಟ್ಟುಕಥೆ: ಡಿ.ಕೆ. ಸುರೇಶ್‌

Published:
Updated:

ರಾಮನಗರ: ‘ಸಚಿವ ಡಿ.ಕೆ. ಶಿವಕುಮಾರ್ ಹವಾಲಾ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದೆಲ್ಲ ಕಟ್ಟುಕಥೆ. ಅಂತಹ ಯಾವುದೇ ಚಟುವಟಿಕೆಯಲ್ಲಿ ನಮ್ಮ ಕುಟುಂಬ ಭಾಗಿಯಾಗಿಲ್ಲ’ ಎಂದು ಸಂಸದ ಡಿ.ಕೆ. ಸುರೇಶ್‌ ಶುಕ್ರವಾರ ಇಲ್ಲಿ ಸ್ಪಷ್ಟನೆ ನೀಡಿದರು.

‘ಶಿವಕುಮಾರ್ ಹೆಸರನ್ನು ಕೆಡಿಸುವ ಉದ್ದೇಶದಿಂದ ಈ ರೀತಿಯ ಸುದ್ದಿಗಳನ್ನು ಮಾಧ್ಯಮಗಳ ಮೂಲಕ ತೇಲಿ ಬಿಡಲಾಗುತ್ತಿದೆ. ಇದು ಕೇವಲ ರಾಜಕೀಯ ಷಡ್ಯಂತ್ರ. ಕೇಂದ್ರ ಸರ್ಕಾರವು ಅಧಿಕಾರ ದುರುಪಯೋಗ ಪಡಿಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ನಾವು ಸಂಪೂರ್ಣ ಪಾರದರ್ಶಕವಾಗಿದ್ದು, ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲಿ ಎದುರಿಸಿ ಪರಿಹರಿಸಿಕೊಳ್ಳುತ್ತೇವೆ’ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !