ಬೆಂಗಳೂರು: ‘ನಮ್ಮ ರಾಜ್ಯದ ಧ್ವನಿಯಾಗಿ ಎಚ್.ಡಿ.ದೇವೇಗೌಡರು ಸಂಸತ್ಗೆ ಹೊಗಬೇಕೆಂದು ನನ್ನ ಆಶಯ. ಒಂದು ವೇಳೆ ಅವರು ರಾಜ್ಯಸಭೆಗೆ ಹೊಗಲು ಒಪ್ಪಿದರೆ ನಾನು ತ್ಯಾಗ ಮಾಡಲು ಸಿದ್ದನಿದ್ದೇನೆ. ನನಗೆ ಯಾವುದೆ ಅಸಮಾಧಾನ ಇಲ್ಲ’ ಎಂದು ಜೆಡಿಎಸ್ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹೇಳಿದರು.

ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಬೆಂಗಳೂರು ನಗರ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಮಹಿಳಾ ವಿಭಾಗ, ಅಲ್ಪಸಂಖ್ಯಾತ ವಿಭಾಗ, ಕಾರ್ಮಿಕ ವಿಭಾಗದ ಅಧ್ಯಕ್ಷರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಿದ್ದರು.

ಬಿಬಿಎಂಪಿ ಚುನಾವಣೆಯಲ್ಲಿ ಕನಿಷ್ಠ 70 ಸೀಟುಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ. ಹೀಗಾಗಿ ಈಗಿನಿಂದಲೆ ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಟಿಕೆಟ್ ಆಕಾಂಕ್ಷಿಗಳು ನಾಳೆಯಿಂದ ಒಂದು ತಿಂಗಳೊಳಗೆ ಅರ್ಜಿ ಸಲ್ಲಿಸಬಹುದು
ಪ್ರತಿ ವಾರ್ಡ್ನಲ್ಲೂ ಪಕ್ಷದ ಕಚೇರಿ ತೆರೆಯಲು ವಾರ್ಡ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದೇವೆ. ವಾರ್ಡ್ ಮಟ್ಟದಲ್ಲಿ ಪಕ್ಷ ಸದೃಢ ಮಾಡಲು ಇವತ್ತಿನಿಂದಲೇ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ರೆಡ್ಡಿ ಹೇಳಿದರು.

ಸಿಎಎ ಖಂಡಿಸಿ ಪ್ರತಿಭಟನೆಗೆ ನಿರ್ಧಾರ: ಪೌರತ್ವ ತಿದ್ದುಪಡಿ ಕಾಯ್ದೆ ಖಂಡಿಸಿ ಇದೇ 24 ರಂದು ಟೌನ್ಹಾಲ್ ಬಳಿ ಬೆಂಗಳೂರು ಜೆಡಿಎಸ್ ವಿಭಾಗದ ವತಿಯಿಂದ ಬೃಹತ್ ಪ್ರತಿಭಟನೆ ಮಾಡಲು ಸಭೆಯಲ್ಲಿ ತಿರ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.