ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣಕನ್ನಡ ಲಾಕ್‌ಡೌನ್ | ಸಿಎಂ ಜತೆ ಚರ್ಚಿಸಿ ತೀರ್ಮಾನ: ಕೋಟ ಶ್ರೀನಿವಾಸಪೂಜಾರಿ

Last Updated 12 ಜುಲೈ 2020, 10:21 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.

ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಲಾಕ್‌ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ನಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ದಿಢೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT