ಮಂಗಳವಾರ, ಫೆಬ್ರವರಿ 25, 2020
19 °C

ಟಿಬೆಟಿಯನ್ ಧರ್ಮಗುರು ದಲೈಲಾಮಾಗೆ ಹುಬ್ಬಳ್ಳಿಯಲ್ಲಿ ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ಮುಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿಲು ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಅವರು ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಗುರುವಾರ ಬಂದರು.

ಧಾರವಾಡ ಜಿಲ್ಲಾಡಾಳಿತ ದಲೈಲಾಮಾ ಅವರಿಗೆ ಸ್ವಾಗತ ಕೋರಿ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ಬೀಳ್ಕೊಡಲಾಯಿತು.

ಮುಂಡಗೋಡ (ಉತ್ತರ ಕನ್ನಡ): ತಾಲ್ಲೂಕಿನ ವಡಗಟ್ಟಾ ಚೆಕ್‌ಪೋಸ್ಟ್‌ನಲ್ಲಿ ಜಿಲ್ಲಾಡಳಿತ ದ ವತಿಯಿಂದ ದಲೈಲಾಮಾ ಅವರನ್ನು ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ ಹೂಗುಚ್ಛ ನೀಡಿ ಸ್ವಾಗತಿಸಿದರು.

12 ದಿನಗಳ ಕಾಲ ತಾಲ್ಲೂಕಿನ ಟಿಬೆಟನ್ ಕ್ಯಾಂಪ್ ನಲ್ಲಿ ವಾಸ್ತವ್ಯ ಹೂಡಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಎರಡು ವರ್ಷಗಳ ನಂತರ ದಲೈಲಾಮಾ ತಾಲ್ಲೂಕಿಗೆ ಆಗಮಿಸಿದ್ದರಿಂದ ಬಿಕ್ಕುಗಳು, ಟಿಬೆಟನ್ನರು  ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅದ್ದೂರಿ ಸ್ವಾಗತ ಕೋರಿದರು.

ಲಾಮಾ ಕ್ಯಾಂಪ್ ನಂ.2ರ ಗಾಡೆನ್ ಲಾಚಿ ಬೌದ್ಧ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ದಲೈಲಾಮಾ ಅವರು, ಬಿಕ್ಕುಗಳನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಮೊಹಮ್ಮದ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ,  ಶಿರಸಿ ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಶ್ರೀಧರ ಮುಂದಲಮನಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು