ಬುಧವಾರ, ಆಗಸ್ಟ್ 4, 2021
24 °C

ಬೆಳಗಾವಿ: ನರ್ತಿಸಿ ನೆರವು ಕೋರಿದ ಡ್ಯಾನ್ಸರ್‌ಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೋವಿಡ್–19 ಲಾಕ್‌ಡೌನ್‌ ಪರಿಣಾಮ ಗಳಿಕೆ ಇಲ್ಲದೆ ಕಂಗಾಲಾಗಿರುವ ನಮಗೆ ಸರ್ಕಾರದಿಂದ ನೆರವು ಕಲ್ಪಿಸಬೇಕು’ ಎಂದು ಆಗ್ರಹಿಸಿ ನೃತ್ಯಪಟುಗಳು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡ್ಯಾನ್ಸ್‌ ಮಾಡುತ್ತಾ ಸೋಮವಾರ ಪ್ರತಿಭಟನೆ ನಡೆಸಿದರು.

‘ಬೆಳಗಾವಿ ನೃತ್ಯ ತರಬೇತಿ ಶಿಕ್ಷಣ ಸಂಸ್ಥೆ’ ನೇತೃತ್ವದಲ್ಲಿ ಸೇರಿದ್ದ ಅವರು, ‘ಕೊರೊನಾ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಘೋಷಿಸಲಾದ ಲಾಕ್‌ಡೌನ್‌ನಿಂದ ನಾವೂ ಸಂಕಷ್ಟಕ್ಕೆ ಒಳಗಾಗಿದ್ದೇವೆ. ಸಂಸ್ಥೆ ವತಿಯಿಂದ 43 ನೃತ್ಯ ತರಬೇತಿ ಕೇಂದ್ರಗಳನ್ನು ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿದೆ. ಲಾಕ್‌ಡೌನ್‌ ವೇಳೆ ತರಬೇತಿ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ, ಬಾಡಿಗೆ ಪಾವತಿಸುವುದು ಸಾಧ್ಯವಾಗಿಲ್ಲ. ಆದರೆ, ಮಾಲೀಕರಿಂದ ಒತ್ತಡ ಬರುತ್ತಲೇ ಇದೆ’ ಎಂದು ತಿಳಿಸಿದರು.

‘3 ತಿಂಗಳವರೆಗಿನ ಬಾಡಿಗೆ ಮನ್ನಾ ಮಾಡುವಂತೆ ಮಾಲೀಕರಿಗೆ ಆದೇಶ ನೀಡಬೇಕು. ತರಬೇತಿ ಕೇಂದ್ರಗಳನ್ನು ಪುನರಾರಂಭಿಸಲು ಅವಕಾಶ ಕೊಡಬೇಕು. ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿಯಮಗಳನ್ನು ಪಾಲಿಸಲಾಗುವುದು. ಆಗ ಬಾಡಿಗೆ ಪಾವತಿಗೆ ಸಹಕಾರಿಯಾಗುತ್ತದೆ’ ಎಂದರು.

ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಸದಾನಂದ ಕಲ್ಪತ್ರಿ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು