ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ಕಸ ಮಿಡತೆಗಳ ಸಂಭಾವ್ಯ ಅಪಾಯವನ್ನು ಹಿಮ್ಮೆಟ್ಟಿಸಬೇಕು: ಎಚ್.ಡಿ. ಕುಮಾರಸ್ವಾಮಿ

Last Updated 27 ಮೇ 2020, 15:32 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಭಾರತವನ್ನು ಬಾಧಿಸುತ್ತಿರುವ ರಕ್ಕಸ ಮಿಡತೆಗಳು ಮಹಾರಾಷ್ಟ್ರ ಪ್ರವೇಶಿಸಿದ್ದು, ಕರ್ನಾಟಕಕ್ಕೂ ಪ್ರವೇಶಿಸುವ ಆತಂಕವಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕ್ಷಣಾರ್ಧದಲ್ಲಿ ಬೆಳೆ ತಿಂದು ಹೋಗುವ ಈ ಮಿಡತೆಗಳು ಭವಿಷ್ಯದಲ್ಲಿ ಆಹಾರ ಕೊರತೆಗೆ ಕಾರಣವಾಗುತ್ತವೆ. ಹೀಗಾಗಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಿಡತೆಗಳ ಹಿಂಡು ಸದ್ಯ ಮಹಾರಾಷ್ಟ್ರದ ಅಮರಾವತಿಯಲ್ಲಿವೆ ಎಂಬ ಮಾಹಿತಿ ಇದೆ. ಅಮರಾವತಿ ಭೌಗೋಳಿಕವಾಗಿ ನಮ್ಮ ಬೀದರ್, ಕಲಬುರ್ಗಿಗೆ ಹತ್ತಿರದ ಜಿಲ್ಲೆ. ಪೂರ್ವ ಆಫ್ರಿಕಾ, ಇರಾನ್ ಮರುಭೂಮಿಯಲ್ಲಿ ಕಂಡುಬರುವ ಈ ಮಿಡತೆಗಳು ಪಾಕಿಸ್ತಾನದ ಮೂಲಕ ಭಾರತ ಪ್ರವೇಶಿಸಿವೆ. ಇವುಗಳಿಗೆ ಜಿಲ್ಲೆಗಳನ್ನು ದಾಟುವುದು ಅಸಾಧ್ಯವೇನಲ್ಲ ಎಂದಿದ್ದಾರೆ.

1 ಚದರ ಕಿ.ಮೀ ಪ್ರದೇಶದಲ್ಲಿ 4 ಕೋಟಿ ಮಿಡತೆಗಳು ಇರುತ್ತವೆ. ತಮ್ಮ ದೇಹ ಗಾತ್ರದಷ್ಟೇ ಆಹಾರವನ್ನು ಈ ಮಿಡತೆಗಳು ತಿನ್ನುತ್ತವೆ ಎಂದರೆ, ಇವು ಯಾವ ಪ್ರಮಾಣದಲ್ಲಿ ಬೆಳೆ ನಾಶ ಮಾಡುತ್ತವೆ ಎಂಬುದನ್ನು ಲೆಕ್ಕಿಸಬಹುದು. ಹೀಗಾಗಿ, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲಿ ಔಷಧ ಸಿಂಪಡಣೆ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯಕ್ಕೂ ಇವುಗಳ ಭೀತಿ ಇರುವುದರಿಂದ ಸರ್ಕಾರ ಕೂಡಲೇ ರಾಜಸ್ಥಾನ, ಮಧ್ಯಪ್ರದೇಶ, ಉತ್ತರ ಪ್ರದೇಶದ ಅಭಿಪ್ರಾಯ ಪಡೆದು ಕಾರ್ಯತಂತ್ರಗಳಿಗೆ ಸಿದ್ಧವಾಗಬೇಕು. ಸಂಭಾವ್ಯ ಅಪಾಯವನ್ನು ಮೊದಲೇ ಹಿಮ್ಮೆಟ್ಟಿಸಬೇಕು. ಬೆಳೆ ತಿಂದು ರೈತರ ಬದುಕು ಅತಂತ್ರ ಮಾಡುವ ಈ ರಕ್ಕಸ ಮಿಡತೆಗಳು ರಾಜ್ಯಕ್ಕೆ ಬಾರದೇ ಇರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT