ರಾಮನಗರದಲ್ಲಿ ದರ್ಶನ್ ಅಭಿಮಾನಿಗಳಿಗೆ ಲಾಟಿಯೇಟು

7

ರಾಮನಗರದಲ್ಲಿ ದರ್ಶನ್ ಅಭಿಮಾನಿಗಳಿಗೆ ಲಾಟಿಯೇಟು

Published:
Updated:

ರಾಮನಗರ: ಚಿತ್ರನಟ ದರ್ಶನ್ ರನ್ನು ಕಾಣುವ ಸಲುವಾಗಿ ಇಲ್ಲಿನ ಐಜೂರು ವೃತ್ತದಲ್ಲಿ ಬುಧವಾರ ಬೆಳಗ್ಗೆಯಿಂದ  ಸಾವಿರಾರು ಅಭಿಮಾನಿಗಳು ನೆರೆದಿದ್ದು, ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ‌ ಪ್ರಹಾರ ನಡೆಸಿದರು.

ಬೆಂಗಳೂರು ಮೈಸೂರು ಹೆದ್ದಾರಿ ಪಕ್ಕದಲ್ಲಿ  ಎಂ.ಎಸ್. ಗೋಲ್ಡ್ ಆಭರಣ ಮಳಿಗೆಯನ್ನು ಚಿತ್ರನಟ ದರ್ಶನ್ ಉದ್ಘಾಟಿಸಲಿದ್ದಾರೆ. ಅವರನ್ನು ಕಾಣಲು ಹೆದ್ದಾರಿಯ ಅಕ್ಕಪಕ್ಕ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದಾರೆ.‌

ಅಕ್ಕಪಕ್ಕದ ಕಟ್ಟಡಗಳ ಮೇಲೂ‌ ನೂರಾರು ಮಂದಿ ಕಿಕ್ಕಿರಿದಿದ್ದಾರೆ. ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಪ್ರಯೋಗಿಸಿದರು. ಆದರೂ ಯುವಕರು ಕದಲದೇ ನಿಂತಿದ್ದಾರೆ.

ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿ‌ ಇದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !