ದಸರಾ: 2,500 ಹೆಚ್ಚುವರಿ ಬಸ್‌

7

ದಸರಾ: 2,500 ಹೆಚ್ಚುವರಿ ಬಸ್‌

Published:
Updated:

ಬೆಂಗಳೂರು: ದಸರಾ ಹಬ್ಬಕ್ಕೆ ನಗರದಿಂದ ರಾಜ್ಯದ ನಾನಾ ಭಾಗಗಳಿಗೆ ಹೋಗುವವರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ವೇಗದೂತ, ಕರ್ನಾಟಕ ವೈಭವ, ರಾಜಹಂಸ, ಐರಾವತ ಹಾಗೂ ಐರಾವತ ಕ್ಲಬ್ ಕ್ಲಾಸ್ ಬಸ್‌ಗಳ ಜೊತೆಗೆ ಹೆಚ್ಚುವರಿ ಬಸ್‍ಗಳನ್ನು ಓಡಿಸಲಿದೆ. ಇದೇ 17 ರಿಂದ 22ರವರೆಗೆ ರಾಜ್ಯ ಮತ್ತು ಹೊರ ರಾಜ್ಯದ ವಿವಿಧ ಸ್ಥಳಗಳಿಗೆ 2,500ಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ
ಮಾಡಲಾಗಿದೆ.

ಬೆಂಗಳೂರಿನಲ್ಲಿ ಪ್ರಸ್ತುತ ಸಂಚರಿಸುವ ವಾಹನಗಳು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಹೊರಡಲಿವೆ. ರಾಜ್ಯದ ಮತ್ತು ಹೊರ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಇದೇ 20 ರಿಂದ 21ರವರೆಗೆ ವಿಶೇಷ ವಾಹನಗಳು ಸಂಚರಿಸಲಿವೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ 150 ಹೆಚ್ಚುವರಿ ಬಸ್‌ಗಳು ಹಾಗೂ ಮೈಸೂರಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರಯಾಣಿಕರ ಅನುಕೂಲಕ್ಕಾಗಿ 300 ವಿಶೇಷ ಬಸ್‌ಗಳು ಸಂಚರಿಸಲಿವೆ.

ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಹೊಸಪೇಟೆ, ರಾಯಚೂರು ಹಾಗೂ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ತಿರುಚಿನಾಪಳ್ಳಿ, ಮಧುರೈ ಕಡೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಮೊಬೈಲ್ ಮೂಲಕ ಎಂ-ಬುಕಿಂಗ್‍ ಹಾಗೂ ಇ-ಟಿಕೆಟ್ ಬುಕಿಂಗ್‍ಗಾಗಿ www.ksrtc.in ವೆಬ್ ಸೈಟ್ ಸಂಪರ್ಕಿಸಬಹುದು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !