ಬುಧವಾರ, ಆಗಸ್ಟ್ 21, 2019
22 °C
₹20.50 ಕೋಟಿ ಅನುದಾನ: ಸ್ಥಳೀಯ ಕಲಾವಿದರಿಗೆ ಅವಕಾಶ

ದಸರಾ ಉದ್ಘಾಟನೆಗೆ ಭೈರಪ್ಪ

Published:
Updated:

ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಉದ್ಘಾಟಿಸಲಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಭೈರಪ್ಪ ಅವರನ್ನು ಆಹ್ವಾನಿ
ಸಲು ನಿರ್ಧಾರ ಕೈಗೊಳ್ಳಲಾಯಿತು.

‘ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಇದೆ. ಅದ್ದೂರಿ, ಸಾಂಪ್ರದಾಯಿಕ ಆಚರಣೆ ಬಗ್ಗೆ ಚರ್ಚಿಸಿಲ್ಲ. ಹಿಂದೆಯೂ ಇಂಥ ಸಂದಿಗ್ಧ ಸ್ಥಿತಿಯಲ್ಲೂ ಆಚರಣೆ ಮಾಡಲಾಗಿದೆ. ಹಾಗಾಗಿ ಪ್ರತಿ ವರ್ಷದಂತೆ ಈ ಬಾರಿಯೂ ದಸರಾ ಆಚರಣೆ ಮಾಡಲಾಗುತ್ತಿದ್ದು, ಯಾವುದೇ ರೀತಿಯ ವಿಂಗಡಣೆ ಮಾಡಿಲ್ಲ’ ಎಂದು ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಸ್ಥಳೀಯರಿಗೆ ಅವಕಾಶ: ‘ಹಿಂದೆ ಹೊರ ರಾಜ್ಯದ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗಿತ್ತು. ಈ
ಸಲ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ನೀಡಲಾಗುವುದು’ ಎಂದು ತಿಳಿಸಿದರು.

Post Comments (+)