ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಪುನಶ್ಚೇತನಕ್ಕೆ ಆದ್ಯತೆ ಡಿಸಿಎಂ ಅಶ್ವತ್ಥನಾರಾಯಣ

Last Updated 13 ಜೂನ್ 2020, 20:40 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊರೊನಾ ಪರಿಸ್ಥಿತಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದ್ದು, ಜೊತೆಗೆ ಆರ್ಥಿಕ ಪುನಶ್ಚೇತನಕ್ಕೂ ಸುಧಾರಣಾ ಕ್ರಮಗಳನ್ನು ಕೈಗೊಳ್ಳುತ್ತಿದೆ’ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಮೆಲ್ಬರ್ನ್ ಕನ್ನಡ ಸಂಘ ಶನಿವಾರ ಆಯೋಜಿಸಿದ್ದ ವಿಡಿಯೊ ಸಂವಾದದಲ್ಲಿ ಮಾತನಾಡಿದ ಅವರು, ‘ಆರ್ಥಿಕ ಪುನಶ್ಚೇತನದ ಹಾದಿಯಲ್ಲಿ ಸಾಕಷ್ಟು ಸವಾಲುಗಳಿದ್ದರೂ, ಅದನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ನಮಗಿದೆ’ ಎಂದರು.

‘ಲಾಕ್‌ಡೌನ್‌ ಸಡಿಲಿಕೆ ನಂತರ ಅಂತರರಾಜ್ಯ, ಅಂತರಜಿಲ್ಲೆಗಳ ನಡುವೆ ಸಂಚಾರ ಮುಕ್ತವಾಗಿರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಿದೆ. ಲಾಕ್‌ಡೌನ್‌ನಿಂದ ಸಂತ್ರಸ್ತರಾದವರು ಬದುಕು ಕಟ್ಟಿಕೊಳ್ಳಲು ಸಮಸ್ಯೆ ಆಗದಂತೆ ನೆರವು ಒದಗಿಸಲಾಗಿದೆ. ಗ್ರಾಮ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಸಮೀಕ್ಷೆ ನಡೆಸಿ ಮಾಹಿತಿಯನ್ನು ಡಿಜಿಟಲೀಕರಣ ಮಾಡಲಾಗಿದೆ. ಉಚಿತವಾಗಿ ಕೋವಿಡ್‌ ಚಿಕಿತ್ಸೆ ಹಾಗೂ ಸಾಂಸ್ಥಿಕ ಕ್ವಾರಂಟೈನ್‌ ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.

‌‘ವೈದ್ಯ ನಮಸ್ಕಾರ ಥ್ರೂ ಸೂರ್ಯ ನಮಸ್ಕಾರ’ ಪರಿಕಲ್ಪನೆಯಲ್ಲಿ ಜೂನ್‌ 21ರಂದು ಆಸ್ಟ್ರೇಲಿಯಾದಲ್ಲಿ ಆಯೋಜಿಸಿರುವ ವಿಶ್ವ ಯೋಗ ದಿನಾಚರಣೆಗೆ ವ್ಯಕ್ತಪಡಿಸಿದ ಅವರು, ‘ದೂರದ ದೇಶದಲ್ಲಿ ಕನ್ನಡದ ಕಂಪು ಪಸರಿಸುವ ಜತೆಗೆ ದೇಶದ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುತ್ತಿರುವುದು ಶ್ಲಾಘನಾರ್ಹ’ ಎಂದರು.

‘ಆಸ್ಟ್ರೇಲಿಯಾದ ಕನ್ನಡ ಶಾಲೆಗಳಲ್ಲಿ 11 ಮತ್ತು 12 ತರಗತಿವರೆಗೂ ವಿಸ್ತರಿಸಲು ಕರ್ನಾಟಕ ಸರ್ಕಾರ ನೆರವು ನೀಡುವ ಜತೆಗೆ,
ಕನ್ನಡ ಶಿಕ್ಷಕರ ಕೊರತೆ ನೀಗಿಸಬೇಕು’ ಎಂಬ ಮೆಲ್ಬರ್ನ್ ಕನ್ನಡಿಗರ ಮನವಿಗೆ ಸ್ಪಂದಿಸಿದ ಉಪಮುಖ್ಯಮಂತ್ರಿ, ಈ ಕುರಿತು ಮುಖ್ಯ
ಮಂತ್ರಿ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT