ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರದ ಅಪೇಕ್ಷೆ ಇರಬಹುದು, ಭಿನ್ನಮತವಲ್ಲ: ಡಿಸಿಎಂ ಲಕ್ಷ್ಮಣ ಸವದಿ

Last Updated 1 ಜೂನ್ 2020, 9:12 IST
ಅಕ್ಷರ ಗಾತ್ರ

ಬಳ್ಳಾರಿ: ಎಲ್ಲರಿಗೂ ಅಧಿಕಾರದ ಅಪೇಕ್ಷೆ ಇರುವುದು ಸಹಜ. ಅದರ ಕುರಿತು ಮತ್ತು ರಾಜಕೀಯ ಬದಲಾವಣೆ ಬಗ್ಗೆ ಕೆಲವು ಶಾಸಕರು ಚರ್ಚೆ ಮಾಡಿರಬಹುದು. ಚರ್ಚೆ ಮಾಡಿದ ಮಾತ್ರಕ್ಕೆ ಅದು ಭಿನ್ನಮತವಲ್ಲ ಎಂದು ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುರುಗೇಶ್ ನಿರಾಣಿ ಅವರ ಮನೆಯಲ್ಲಿ ಎಲ್ಲರೂ ಸೇರಿ ಭೋಜನ ಕೂಟ ಮಾಡಿದ್ದು ನಿಜ. ಲಾಕ್‌ಡೌನ್ ಹಿನ್ನೆಲೆ ಬೆಂಗಳೂರಿನಲ್ಲಿ ಎಲ್ಲಾ ಹೋಟೆಲ್‌ಗಳು ಬಂದ್ ಆಗಿದ್ದವು. ಎಲ್ಲೂ ಊಟ ಸಿಗುತ್ತಿರಲಿಲ್ಲ. ನಮ್ಮೂರಿಗೆ ಬಂದಾಗ ಶಾಸಕರಿಗೆ ನಾನೂ ಕೂಡ ಭೂಜನ ಕೂಟ ಏರ್ಪಡಿಸಿದ್ದೆ. ಅದು ಭಿನ್ನಮತವಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ನಮ್ಮ ನಾಯಕರು ಎಂದರು.

ಬಸನಗೌಡ ಪಾಟೀಲ್ ಯತ್ನಾಳ್, ಉಮೇಶ್‌ ಕತ್ತಿ ಅವರ ವೈಯಕ್ತಿಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆಗೆ ಕಳುಹಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅದರಲ್ಲಿ ತಪ್ಪಿಲ್ಲ. ಬೆಳಗಾವಿಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ವರಿಷ್ಠರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಎಲ್ಲವನ್ನೂ ಮಾತುಕತೆ ಮೂಲಕ ಸರಿಪಡಿಸಲಾಗುತ್ತದೆ ಎಂದರು.

ಅರಣ್ಯ ಸಚಿವ ಆನಂದ್‌ ಸಿಂಗ್‌, ಸಂಸದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT