ಡಿಸಿಎಂ ಹುದ್ದೆ ಅಸಾಂವಿಧಾನಿಕ ಎಂದು ಪಿಐಎಲ್‌ ಸಲ್ಲಿಸಿದ್ದ ಅರ್ಜಿದಾರರಿಗೆ ದಂಡ

7
₹ 10 ಸಾವಿರ ದಂಡ ವಿಧಿಸಿದ ಹೈಕೋರ್ಟ್‌

ಡಿಸಿಎಂ ಹುದ್ದೆ ಅಸಾಂವಿಧಾನಿಕ ಎಂದು ಪಿಐಎಲ್‌ ಸಲ್ಲಿಸಿದ್ದ ಅರ್ಜಿದಾರರಿಗೆ ದಂಡ

Published:
Updated:
ಹೈಕೋರ್ಟ್‌

ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ಅಸಾಂವಿಧಾನಿಕ ಎಂದು ಆಕ್ಷೇಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಜಾಗೊಳಿಸಿರುವ ಹೈಕೋರ್ಟ್ ಅರ್ಜಿದಾರರಿಗೆ ₹ 10 ಸಾವಿರ ದಂಡ ವಿಧಿಸಿದೆ.

ಈ ಕುರಿತಂತೆ ಅರ್ಜಿದಾರರಾದ ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರೊಫೆಸರ್ ಶೇಖರ ಅಯ್ಯರ್ ಅವರು ದಂಡದ ಮೊತ್ತವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ 30 ದಿನಗಳಿಗೆ ನೀಡಬೇಕು ಎಂದು ಆದೇಶಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿತು.

'ಪಿಐಎಲ್ ಗಳ ದುರುಪಯೋಗ ಆಗುತ್ತಿದೆ. ನಿಜವಾದ ಕಾರಣಕ್ಕೆ ಪಿಐಎಲ್ ಸಲ್ಲಿಕೆ ಆಗುತ್ತಿಲ್ಲ' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಬರಹ ಇಷ್ಟವಾಯಿತೆ?

  • 4

    Happy
  • 1

    Amused
  • 1

    Sad
  • 0

    Frustrated
  • 2

    Angry

Comments:

0 comments

Write the first review for this !