ಸೋಮವಾರ, ಸೆಪ್ಟೆಂಬರ್ 27, 2021
24 °C

ವಕೀಲ ಮನೋಜ ಹಾನಗಲ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಹಿಂದೂಸ್ತಾನಿ ಗಾಯಕಿ ಡಾ. ಗಂಗೂಬಾಯಿ ಹಾನಗಲ್‌ ಅವರ ಮೊಮ್ಮಗ, ವಕೀಲ ಮನೋಜ ಹಾನಗಲ್(54) ಮಂಗಳವಾರ ರಾತ್ರಿ 11ಕ್ಕೆ ಹೃದಯಾಘಾತದಿಂದ ನಿಧನರಾದರು.‌

ಡಾ.ಗಂಗೂಬಾಯಿ ಹಾನಗಲ್‌ ಮ್ಯೂಸಿಕ್‌ ಫೌಂಡೇಷನ್‌ ಅಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ನಗರದಲ್ಲಿ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದರು.

ಹುಬ್ಬಳ್ಳಿಯಲ್ಲಿ ನಡೆದ ಈದ್ಗಾ ಮೈದಾನ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರು, ವಿಶ್ವ ಹಿಂದೂ ಪರಿಷತ್‌ ಬಜರಂಗದಳದಲ್ಲಿ ಸಕ್ರಿಯರಾಗಿದ್ದರು. 

ಬುಧವಾರ (ಮೇ 15) ಸಂಜೆ 4ಕ್ಕೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.