ಬುಧವಾರ, ಫೆಬ್ರವರಿ 19, 2020
28 °C

ರಾವೂರು ಸಿದ್ದಲಿಂಗ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಾಡಿ (ಕಲಬುರ್ಗಿ ಜಿಲ್ಲೆ): ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ (61) ಮಂಗಳವಾರ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. 

ಮೂಢನಂಬಿಕೆ ಹೋಗಲಾಡಿಸಲು ಶ್ರಮಿಸುವ ಜೊತೆಗೆ ಸಾವಿರಾರು ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದುದು ಶ್ರೀಗಳ ಸಾಧನೆ. ಶ್ರೀಗಳ ಪಾರ್ಥಿವ ಶರೀರವನ್ನು ಬುಧವಾರ ತಡರಾತ್ರಿ ಗ್ರಾಮಕ್ಕೆ ತರಲಾಯಿತು. ಮಠದ ಆವರಣದಲ್ಲಿ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ಭಕ್ತರ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆಗೆ ಮಠದ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)