ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ: 1,500 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌

Last Updated 31 ಅಕ್ಟೋಬರ್ 2018, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಟಿಸಿಯು ದೀಪಾವಳಿ ಪ್ರಯುಕ್ತ 1,500 ಹೆಚ್ಚುವರಿ ಬಸ್‌ಗಳನ್ನು ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಭಾಗಗಳಿಗೆ ವ್ಯವಸ್ಥೆ ಮಾಡಿದೆ.

ನ. 2ರಿಂದ 5ರವರೆಗೆ ಬೆಂಗಳೂರಿನಿಂದ ವಿವಿಧ ಕಡೆಗಳಿಗೆ ಹಾಗೂ 11ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್‌ ಸಂಚಾರ ಇರಲಿದೆ.

ಮೆಜೆಸ್ಟಿಕ್‌ನಿಂದ ರಾಜ್ಯದ ಎಲ್ಲ ಭಾಗಗಳಿಗೆ, ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಮಡಿಕೇರಿ ಮಾರ್ಗದಲ್ಲಿ ಸಂಚಾರ, ಬಸವೇಶ್ವರ ಬಸ್‌ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌, ಮಲ್ಲೇಶ್ವರಂ 18ನೇ ಅಡ್ಡರಸ್ತೆ, ಬನಶಂಕರಿ, ಜೀವನ್‌ ಭೀಮಾ ನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರದಿಂದ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಟಿಕೆಟ್ ಬುಕ್‌ ಮಾಡಿದಲ್ಲಿ ಶೇ 5ರಷ್ಟು ರಿಯಾಯಿತಿ, ಹೋಗಿ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಶೇ 10ರಷ್ಟು ರಿಯಾಯಿತಿ ನೀಡಲಾಗುವುದು. ಬಸ್‌ ಸಂಚಾರದ ವೇಳಾಪಟ್ಟಿ ನಿಗಮದ ವೆಬ್‌ಸೈಟ್‌ www.ksrtc.inನಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT