ಶುಕ್ರವಾರ, ಡಿಸೆಂಬರ್ 6, 2019
20 °C

ಅನರ್ಹರನ್ನು ಸೋಲಿಸಲು ಆರ್‌ಪಿಐ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅನರ್ಹ ಶಾಸಕರನ್ನು ಮತದಾರರು ಬೆಂಬಲಿಸಬಾರದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ಒತ್ತಾಯಿಸಿದೆ.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಕೌತಾಳ್,‘‌ ಅಧಿಕಾರದ ಮೋಹ ಹಾಗೂ ಹಣದ ದಾಹದಿಂದ ರಾಜಕಾರಣಿಗಳು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ. ಇಂತಹ ಜನಪ್ರತಿನಿಧಿಗಳಿಗೆ ಮತದಾರರೇ ಸೂಕ್ತ ಉತ್ತರ ನೀಡಬೇಕಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವ ನಿಟ್ಟಿನಲ್ಲಿ ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು’ ಎಂದರು.

ಉಪಾಧ್ಯಕ್ಷ ರಾಜು ಎಂ.ತಳವಾರ,‘ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಶಾಸಕರನ್ನು ಹೆದರಿಸಿ ತಮ್ಮ ಪಕ್ಕಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಸಂವಿಧಾನದ ಆಶಯಗಳನ್ನೇ ಮರೆತಿದ್ದಾರೆ’ ಎಂದು ದೂರಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು