ಬುಧವಾರ, ಏಪ್ರಿಲ್ 1, 2020
19 °C

ಮಹದಾಯಿ: ಶೀಘ್ರ ಅಧಿಸೂಚನೆ ಹೊರಡಿಸುವಂತೆ ಮನವಿ ಸಲ್ಲಿಸಲು 26ರಂದು ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಳಗಾವಿ: ‘ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ತಕ್ಷಣ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಕೋರಲು ಇದೇ ತಿಂಗಳ 26ರಂದು ನವದೆಹಲಿಗೆ ಹೋಗುತ್ತಿರುವೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನೂ ಕರೆದೊಯ್ಯಲು ಪ್ರಯತ್ನಿಸುವೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. 

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಯೋಜನೆಗೆ ತಗಾದೆ ತೆಗೆಯುತ್ತಿರುವ ನೆರೆಯ ಗೋವಾ ರಾಜ್ಯ ಬೇಕಿದ್ದರೆ ನ್ಯಾಯಾಲಯಕ್ಕೆ ಹೋಗಲಿ’ ಎಂದರು. 

‘ಯೋಜನೆ ಅನುಷ್ಠಾನಕ್ಕೆ ಸುಮಾರು ₹200 ಕೋಟಿ ಕೊಡುತ್ತೇನೆಂದು ಮುಖ್ಯಮಂತ್ರಿಯವರು ಈಗಾಗಲೇ ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು’ ಎಂದು ಹೇಳಿದರು. 
‘ಮಹದಾಯಿ ಉಗಮಸ್ಥಳವಾಗಿರುವ ಖಾನಾಪುರದ ಕಣಕುಂಬಿಗೆ ಸದ್ಯದಲ್ಲಿಯೇ ಭೇಟಿ ನೀಡುತ್ತೇನೆ. ಕೃಷ್ಣಾ ಹಾಗೂ ಕಾವೇರಿ ನದಿ ನೀರು ಹಂಚಿಕೆ ಕುರಿತು ಮಾಹಿತಿ ಪಡೆದು ಪ್ರತಿಕ್ರಿಯಿಸುವೆ’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು