ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಶಿಷ್ಟ ಪಂಗಡಕ್ಕೆ ಶೇ 7.5 ರಷ್ಟು ಮೀಸಲಾತಿ ನೀಡಲು ಆಗ್ರಹ

Last Updated 1 ಜೂನ್ 2019, 18:47 IST
ಅಕ್ಷರ ಗಾತ್ರ

ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಇರುವ ಶೇ 3 ರಷ್ಟಿರುವ ಮೀಸಲಾತಿಯನ್ನು ಶೇ 7.5ಕ್ಕೆ ಏರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಇದೇ 6ರಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಘಟಕ ಅಧ್ಯಕ್ಷ ಎಂ.ನರಸಿಂಹಯ್ಯ, ‘ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಜನಸಂಖ್ಯೆಯು 48 ಲಕ್ಷಕ್ಕೂ ಹೆಚ್ಚು ಇದೆ. ನಮ್ಮ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಉದ್ಯೋಗದಿಂದಲೂ ವಂಚಿತರಾಗಿದ್ದಾರೆ. ಈ ಕಾರಣಕ್ಕಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ಆಗ್ರಹಿಸುತ್ತಿದ್ದೇವೆ’ ಎಂದು ಹೇಳಿದರು.

‘ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿಶೇ.7.5ರಷ್ಟು ಮೀಸಲಾತಿಯನ್ನು ನ್ಯಾಯೋಚಿತವಾಗಿ ನೀಡಬೇಕು. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ನಮ್ಮ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಮೀಸಲಾತಿಯನ್ನು ಕೆಲವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅಂತಹವರನ್ನು ಶಿಕ್ಷೆಗೆ ಗುರಿಪಡಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿರುವ ಕ್ರಮಕ್ಕೆ ಕಡಿವಾಣ ಹಾಕಬೇಕು. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು’ ಎಂದು ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT