ಮಂಗಳವಾರ, ಅಕ್ಟೋಬರ್ 20, 2020
22 °C

ಬಿಜೆಪಿ ಶಾಸಕರಿಂದಲೇ ನೆರೆ ಪರಿಹಾರಕ್ಕೆ ಮೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಕೇಂದ್ರ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಬಿಡಿಗಾಸು ನೀಡಿಲ್ಲ ಎಂಬ ಆರೋಪ ಉತ್ತರ ಕರ್ನಾಟಕದಲ್ಲಿ ಬಲವಾಗಿದೆ. ಆದ್ದರಿಂದ ತಕ್ಷಣ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರನ್ನು ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ನಡೆದ ನೆರೆ– ಬರ ಪರಿಹಾರ ಕುರಿತ ಸಮಾಲೋಚನೆಯಲ್ಲಿ ಅವರು ಮಾತನಾಡಿದರು.

‘ಎಲ್ಲಾ ಸಚಿವರು, ಶಾಸಕರು ನಿಯೋಗದೊಂದಿಗೆ ನವದೆಹಲಿಗೆ ತೆರಳಿ ಪರಿಹಾರ ಬಿಡುಗಡೆ ಮಾಡಿಸಬೇಕು’ ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿ.ಸಿ.ಪಾಟೀಲ, ‘ಶೀಘ್ರವೇ ಅನುದಾನ ಬಿಡುಗಡೆಯಾಗಲಿದೆ’ ಎಂದರು. ಇದರಿಂದ ತೃಪ್ತರಾಗದ ಬಸನಗೌಡ, ‘ಜನರ ನಿರೀಕ್ಷೆ ಹುಸಿ ಆಗುವ ಮುನ್ನ ಈ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು